ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಮತ್ತೆ ಮೂವರಲ್ಲಿ ಸೋಂಕು ಪತ್ತೆ

17 ಸಕ್ರಿಯ ಪ್ರಕರಣ
Last Updated 17 ಜೂನ್ 2020, 13:52 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಬುಧವಾರ ದೃಢಪಟ್ಟಿದೆ.

45 ವರ್ಷದ ವ್ಯಕ್ತಿಗೆ (ಪಿ.7575) ಬೇತೂರು ರಸ್ತೆಯ 16 ವರ್ಷದ ಬಾಲಕನ (ಪಿ.6575) ಸಂಪರ್ಕದಿಂದ ಸೋಂಕು ತಗುಲಿದೆ.

ತರಳಬಾಳು ಬಡಾವಣೆಯ 50 ವರ್ಷದ ವ್ಯಕ್ತಿ (ಪಿ.7576) ಶೀತಜ್ವರ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದಿಂದ ಬಂದ 20 ವರ್ಷದ ಯುವತಿಯಲ್ಲಿ (ಪಿ.7577) ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 230ಕ್ಕೇರಿದೆ. ಬುಧವಾರ ಇಬ್ಬರು ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆಯೂ 207ಕ್ಕೇರಿದೆ. 6 ಮಂದಿ ಮೃತಪಟ್ಟಿದ್ದಾರೆ. 17 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT