ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾಚಾರ್ಯಗೆ ಸಚಿವ ಸ್ಥಾನ ನೀಡಲು ಶಾಸಕ ರಾಜೂಗೌಡ ಒತ್ತಾಯ

Last Updated 6 ಡಿಸೆಂಬರ್ 2021, 5:43 IST
ಅಕ್ಷರ ಗಾತ್ರ

ಹೊನ್ನಾಳಿ: ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ಮುತ್ಯಾ (ಎಂ.ಪಿ.ರೇಣುಕಾಚಾರ್ಯ) ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಬಳಿ ಮನವಿ ಮಾಡುತ್ತೇನೆ’ ಎಂದು ಸುರಪುರ ಶಾಸಕ ರಾಜೂಗೌಡ ಹೇಳಿದರು.

ಶುಕ್ರವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಹೊನ್ನಾಳಿಗೆ ಬಂದಿದ್ದ ಅವರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಒಂದು ಕಾಲಕ್ಕೆ ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಈಗ ನಮ್ಮ ಒತ್ತಾಯ ಏನಿದ್ದರೂ ಹಿರಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡಿ ಎಂಬುದಷ್ಟೇ ಆಗಿದೆ’ ಎಂದರು.

‘ಬಿಜೆಪಿ ಸರ್ಕಾರ ಒಂದು ಮನೆ ನೀಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಿದ್ದಾರೆ. ಆದರೆ ನಮ್ಮ ವಸತಿ ಸಚಿವ ವಿ.ಸೋಮಣ್ಣ ಅವರು ಈಗಾಗಲೇ 5 ಲಕ್ಷ ಮನೆ ನೀಡಲು ಅನುಮತಿ ನೀಡಿದ್ದಾರೆ. ಅಲ್ಲದೆ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿಗೆ ಕೇಂದ್ರ ಸರ್ಕಾರ ಅನುದಾನ ನೀಡಿದೆ’ ಎಂದು ತಿರುಗೇಟು ನೀಡಿದರು.

‘ನಮ್ಮ ಸರ್ಕಾರ ಪರಿಶಿಷ್ಟ ಪಂಗಡದವರಿಗೆ 7.5 ಮೀಸಲಾತಿ ನೀಡಲು ಬದ್ಧ. ನಾಗಮೋಹನ್‍ದಾಸ್ ಅವರು ವರದಿ ಸಲ್ಲಿಸಿದ್ದಾರೆ. ಕೂಡಲೇ ವರದಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದೇವೆ’ ಎಂದರು.

‘ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂಬುದು ಕಾಂಗ್ರೆಸ್‍ನವರಿಗೂ ಗೊತ್ತು. ಆದರೂ ಸುಮ್ಮನೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ವಿರೋಧ ಪಕ್ಷದವರ ಬಳಿ ಮಾಹಿತಿ ಇದ್ದರೆ ಸರ್ಕಾರಕ್ಕೆ ನೀಡಲಿ, ಅದನ್ನು ಬಿಟ್ಟು ಕೇವಲ ಹುಸಿ ಆರೋಪ ಮಾಡುವುದನ್ನು ಬಿಡಬೇಕು’ ಎಂದು ಹೇಳಿದರು.

ಶಾಸಕ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭೆ ಅಧ್ಯಕ್ಷ ಬಾಬು ಹೋಬಳದಾರ್, ಬಿಜೆಪಿ ಮುಖಂಡರಾದ ಬೆನಕನಹಳ್ಳಿ ಮಹೇಂದ್ರಗೌಡ, ಪ್ರೇಂಕುಮಾರ್ ಬಂಡಿಗಡಿ, ಮುಖಂಡ ಎಂ.ಪಿ.ರಮೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT