ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿ: ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ

Last Updated 21 ಸೆಪ್ಟೆಂಬರ್ 2020, 2:21 IST
ಅಕ್ಷರ ಗಾತ್ರ

ಚನ್ನಗಿರಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಈಗ ನಡೆಯುವ ಅಧಿವೇಶನದಲ್ಲಿ ಮಂಡಿಸಿ, ಒಳಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಸದಾಶಿವ ಆಯೋಗದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳಾಗಿವೆ. ಆದರೆ ಯಾವ ಸರ್ಕಾರವೂ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿಲ್ಲ. ಇದರಿಂದ ಪರಿಶಿಷ್ಟ ಜಾತಿಯ ಮಾದಿಗ, ಆದಿ ದ್ರಾವಿಡ, ಹರಿಜನ ಸೇರಿ ಹಲವು ಸಮಾಜದವರಿಗೆ ಅನ್ಯಾಯವಾಗುತ್ತಿದೆ. ಸೆ.21ರಿಂದ ಆರಂಭವಾಗುವ ವಿಧಾನಸಭೆಯ ಅಧಿವೇಶನದಲ್ಲಿ ವರದಿ ಮಂಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿತು. ತಹಶೀಲ್ದಾರ್ ಪಟ್ಟರಾಜಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ‌ಮುಖಂಡರಾದ ಎಚ್.ಎನ್. ಮೂರ್ತಿ, ಜೋಳದಹಾಳ್ ಚಂದ್ರಪ್ಪ, ಇಟಗಿ ತಿಮ್ಮಯ್ಯ, ಹೇಮಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT