ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಖಂಡನೀಯ’

Last Updated 3 ಜುಲೈ 2022, 2:21 IST
ಅಕ್ಷರ ಗಾತ್ರ

ದಾವಣಗೆರೆ: ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ನ್ಯಾಯಾಂಗ ವ್ಯವಸ್ಥೆಗೆ ಮಾಡಿರುವ ಅಪಮಾನ ಮತ್ತು ನ್ಯಾಯಾಂಗ ನಿಂದನೆ ಎಂದು ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ ಅಧ್ಯಕ್ಷ ಅನೀಸ್‌ ಪಾಷಾ ಹೇಳಿಕೆ ನೀಡಿದ್ದಾರೆ.

ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆಯ ಬಗ್ಗೆ ಚಾಟಿ ಬೀಸಿ, ದೇಶದಲ್ಲಿ ಯಾರು ಸರ್ವಾಧಿಕಾರಿಗಳಲ್ಲ. ಯಾವುದೇ ವ್ಯಕ್ತಿ ಅಧಿಕಾರದಲ್ಲಿ ಇದ್ದ ತಕ್ಷಣ ಮನಬಂದಂತೆ ನಡೆದುಕೊಳ್ಳಲು ಪ್ರಜಾಪ್ರಭುತ್ವದಲ್ಲಿ ಸಾಧ್ಯವಿಲ್ಲ. ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂಬ ಅಂಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿದಿದಿದೆ. ಇದು ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಹೆಚ್ಚಿಸಿದೆ. ಆದರೆ ಇದರ ವಿರುದ್ಧ ಕೆಲವು ಬಲಪಂಥೀಯರು ‘ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ ಕರಾಳ ದಿನ’ ಎಂದು ಹ್ಯಾಷ್‍ಟ್ಯಾಗನ್ನು ಟ್ರೆಂಡ್ ಮಾಡಿರುವುದು, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಪರ್ದಿವಾಲಾರನ್ನು ‘ಷರೀಯಾ ನ್ಯಾಯಾಧೀಶರು’, ಅಸಮರ್ಥರು, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದಾರೆ ಎಂದೆಲ್ಲ ಅವಹೇಳನ ಮಾಡಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಂಗ ನಿಂದನೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಆ ಮೂಲಕ ದೇಶದ ವ್ಯವಸ್ಥೆಯನ್ನು ಭದ್ರಗೊಳಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT