ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕಾಲೇಜುಗಳ ಪುರುಷರ ವಾಲಿಬಾಲ್ ಇಂದಿನಿಂದ

Published 16 ನವೆಂಬರ್ 2023, 16:32 IST
Last Updated 16 ನವೆಂಬರ್ 2023, 16:32 IST
ಅಕ್ಷರ ಗಾತ್ರ

ಹೊನ್ನಾಳಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ದಾವಣಗೆರೆ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾವಳಿ, ಪುರುಷ ಮತ್ತು ಮಹಿಳೆಯರ ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯೆಯ ಕ್ರೀಡಾಕೂಟಗಳು ನವೆಂಬರ್ 17 ಮತ್ತು 18 ರಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣಗಳಲ್ಲಿ ನಡೆಯಲಿವೆ.

ಬುಧವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಂಶುಪಾಲ ಬಿ.ಜಿ.ಧನಂಜಯ ಅವರು ಈ ಮಾಹಿತಿ ನೀಡಿದರು.

ಈಗಾಗಲೇ 25 ತಂಡಗಳು ನೋಂದಾವಣೆ ಮಾಡಿಕೊಂಡಿವೆ. ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಪ್ರಥಮ ದರ್ಜೆ ಕಾಲೇಜುಗಳ 40 ದೈಹಿಕ ನಿರ್ದೇಶಕರು ಭಾಗವಹಿಸಿಲಿದ್ದು, 25 ತೀರ್ಪುಗಾರರನ್ನು ಹೊರಗಿನ ಕಾಲೇಜುಗಳಿಂದ ಆಯ್ಕೆ ಮಾಡಲಾಗಿದೆ. 600 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟನೆ ಮಾಡಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಪ್ರಭಾರಿ ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ್, ಅಂತರ ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಕೆ.ಇಮ್ತಿಯಾಜ್ ಅಹ್ಮದ್ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ಕ್ರೀಡಾಧಿಕಾರಿ ವೀರಪ್ಪ ಬಿ.ಎಚ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಉಪನ್ಯಾಸಕಾರದ ಡಿ.ಸಿ.ಪಾಟೀಲ್, ಮಂಜುನಾಥ್, ಕೊಟ್ರೇಶ್ ಬೆಳ್ಳುಳ್ಳಿ, ಗೀತಾ, ಅಮೂಲ್ಯ, ಗ್ರಂಥಪಾಲಕ ನಾಗರಾಜನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಂಘಟನಾ ಕಾರ್ಯದರ್ಶಿ ಪಿ.ಎಸ್.ಹರೀಶ್ ಸುದ್ದಿ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT