ದಾವಣಗೆರೆ: ಇಲ್ಲಿನ ವಿನಾಯಕ ಬಡಾವಣೆಯ ವಿಎಂಜಿ ಲೇಔಟ್ನ ಮನೆಯೊಂದರಲ್ಲಿ ಈಚೆಗೆ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸಿರುವ ವಿದ್ಯಾನಗರ ಠಾಣೆ ಪೊಲೀಸರು ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ₹ 15,37,800 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.

ರಾಜಸ್ತಾನದ ಶ್ಯಾಮ್ ಸಿಂಗ್, ಕವರ್ ಪಾಲ್, ಪ್ರತಾಪ್ ಸಿಂಗ್ ಬಂಧಿತರು.

ಆರೋಪಿಗಳಿಂದ 162 ಗ್ರಾಂ ತೂಕದ ಬಂಗಾರದ ಆಭರಣ, 1,350 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ, ₹ 95,600 ನಗದು ಹಾಗೂ 6 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಗಸ್ಟ್ 30ರಂದು ರಾತ್ರಿ ರಂಗನಾಥ ಎಂಬವರ ಮನೆಯ ಬೀಗ ಒಡೆದು ಒಳ ನುಗ್ಗಿದ್ದ ಖದೀಮರು ಆಭರಣ ಕದ್ದೊಯ್ದಿದ್ದರು. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಗರ ಉಪವಿಭಾಗದ ಡಿವೈಎಸ್ಪಿ ಶರಣ ಬಸವೇಶ್ವರ ಬಿ. ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಿಲ್ಪಾ ವೈ.ಎಸ್. ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ಆರೋಪಿಗಳ ಪತ್ತೆಗೆ ತನಿಖಾ ತಂಡಕ್ಕೆ ಗುಜರಾತ್ನ ಸೂರತ್ ನಗರದ ಸಾರೋಲಿ ಠಾಣೆಯ ಪೊಲೀಸರು ಸಹಕರಿಸಿದ್ದಾರೆ. ಬಂಧಿತರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್ಐ ರೂಪಾ ತೆಂಬದ್, ಸಿಬ್ಬಂದಿಯಾದ ಶಂಕರ ಜಾಧವ, ಆನಂದ ಎಂ., ಬೋಜಪ್ಪ, ಗೋಪಿನಾಥ ನಾಯ್ಕ, ಮಲ್ಲಿಕಾರ್ಜುನ ಚಂದ್ರಪ್ಪ, ಬಸವರಾಜ, ಸೀಮಾ ಅವರು ಕಾರ್ಯಾಚರಣೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.