ಬುಧವಾರ, ಆಗಸ್ಟ್ 17, 2022
25 °C
₹ 4.27 ಕೋಟಿ ವೆಚ್ಚದ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕಚೇರಿ ಉದ್ಘಾಟನೆ

ವಿವಿಧ ಕಾಮಗಾರಿಗಳಿಗೆ ಈಶ್ವರಪ್ಪ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶುಕ್ರವಾರ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ್ ಕಟ್ಟಡ ಮತ್ತು ನಿರ್ವಹಣೆ ಯೋಜನೆಯಡಿ ₹ 4.27 ಕೋಟಿ ವೆಚ್ಚದಲ್ಲಿ ಪಿ.ಬಿ. ರಸ್ತೆಯಲ್ಲಿ ನಿರ್ಮಿಸಲಾಗಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ 
₹ 2 ಕೋಟಿ ವೆಚ್ಚದಲ್ಲಿ ತಾಲ್ಲೂಕು ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ
ನೆರವೇರಿಸಿದರು.

ದೀನ್ ದಯಾಳ್ ಉಪಾಧ್ಯಾಯ ಪಂಚಾಯಿತಿ ಸಶಕ್ತೀಕರಣ ಪುರಸ್ಕಾರದಡಿ ದಾವಣಗೆರೆ ಜಿಲ್ಲಾ ಪಂಚಾಯಿತಿಗೆ ಘೋಷಣೆಯಾಗಿರುವ
₹ 50 ಲಕ್ಷ ಪ್ರೋತ್ಸಾಹಕ ಅನುದಾನದಡಿ ನಿರ್ಮಿಸುತ್ತಿರುವ ಸಂಜೀವಿನಿ ಸ್ತ್ರೀ-ಶಕ್ತಿ ಸ್ವಸಹಾಯ ಸಂಘಗಳ ಉತ್ಪನ್ನ ಮಾರಾಟ ಮಳಿಗೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಶಂಕುಸ್ಥಾಪನೆ ನೆರವೇರಿಸಿದರು. ಶಾಸಕ ಎಸ್.ಎ. ರವೀಂದ್ರನಾಥ ಅಧ್ಯಕ್ಷತೆ ವಹಿಸಿದ್ದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಂ.ಪಿ. ರೇಣುಕಾಚಾರ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಶಾಸಕರಾದ ಪ್ರೊ.ಎನ್. ಲಿಂಗಣ್ಣ, ಶಾಮನೂರು ಶಿವಶಂಕರಪ್ಪ, ಮೇಯರ್ ಬಿ.ಜಿ. ಅಜಯಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಿ. ಪರಮೇಶ್ವರಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು