ಬುಧವಾರ, ನವೆಂಬರ್ 30, 2022
17 °C

ಸಾವರ್ಕರ್‌ ಹೋರಾಡಿದ್ದಕ್ಕೇ ‘ವೀರ’ ಪದ ಸೇರಿದೆ: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಕ್ಕಾಗಿಯೇ ಸಾವರ್ಕರ್‌ ಹೆಸರಿನೊಂದಿಗೆ ‘ವೀರ’ ಎಂಬ ಪದ ಸೇರಿಕೊಂಡಿದೆ. ಇಂಥ ವಿಚಾರಗಳು ಸಿದ್ದರಾಮಯ್ಯ ಅವರಿಗೆ ಅರ್ಥವಾಗುವುದಿಲ್ಲವೇಕೆ’ ಎಂದು ಶಾಸಕ ಜಗದೀಶ ಶೆಟ್ಟರ್ ಪ್ರಶ್ನಿಸಿದರು.

‘ಕೇವಲ ಅಲ್ಪಸಂಖ್ಯಾತರ ಮತ ಪಡೆಯುವುದಕ್ಕಾಗಿ ಅವರು ಈ ರೀತಿ ಕೀಳು ಮಟ್ಟದ ಹೇಳಿಕೆ ನೀಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥದ್ದು. ಸಾವರ್ಕರ್‌ ಅವರಿಗೆ ಕರಿ ನೀರಿನ ಶಿಕ್ಷೆ ಏಕೆ ಆಯಿತು ಎಂಬ ಬಗ್ಗೆ ಹಾಗೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ’ ಎಂದು ಭಾನುವಾರ ಅವರು ಪ್ರತಿಕ್ರಿಯಿಸಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಲಿಂಗಾಯತ ಧರ್ಮ ಒಡೆಯಲು ಹೋದರು. ದೊಡ್ಡ ಹೋರಾಟವನ್ನು ಮಾಡಿಸಿದರು. ಅದರ ಫಲವಾಗಿ ಚುನಾವಣೆಯಲ್ಲಿ ಸೋತರು. ರಂಭಾಪುರಿ ಶ್ರೀಗಳ ಎದುರು ಈ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದ ಅವರು, ನಂತರ ಇಲ್ಲ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ನಂಬುವಂತಹ ಪರಿಸ್ಥಿತಿಯಲ್ಲಿ ಇಲ್ಲ. ಅವರು ಬರೀ ಸುಳ್ಳು ಹೇಳುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು