ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳೂರು ವಕೀಲರ ಸಂಘ: ಅಧ್ಯಕ್ಷರಾಗಿ ಬಸವರಾಜ್ ಮರೇನಹಳ್ಳಿ ಅವಿರೋಧ ಆಯ್ಕೆ

Published 25 ಮೇ 2024, 16:28 IST
Last Updated 25 ಮೇ 2024, 16:28 IST
ಅಕ್ಷರ ಗಾತ್ರ

ಜಗಳೂರು: ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ. ಬಸವರಾಜ್ ಮರೇನಹಳ್ಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಟಿ. ಬಸವರಾಜ್ ಮರೇನಹಳ್ಳಿ, ಬಿ. ಪಂಪಣ್ಣ ಹಾಗೂ ಎಸ್. ಹಾಲಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಶನಿವಾರ ಬಿ. ಪಂಪಣ್ಣ ಹಾಗೂ ಎಸ್. ಹಾಲಪ್ಪ ಅವರು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದರಿಂದ ಟಿ. ಬಸವರಾಜ್ ಮರೇನಹಳ್ಳಿ ಅವರು ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಜಿ.ಎಸ್. ಪ್ರಕಾಶ್ ಹಾಗೂ ಕಾರ್ಯದರ್ಶಿಯಾಗಿ ಎ.ಕೆ. ಪರಶುರಾಮ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಣ್ಣೋಬಯ್ಯ ಘೊಷಿಸಿದರು.

ಅಧ್ಯಕ್ಷರಾಗಿದ್ದ ಇ. ಓಂಕಾರಪ್ಪ, ಕಾರ್ಯದರ್ಶಿ ಕೆ.ವಿ. ರುದ್ರೇಶ್ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ತಾಲ್ಲೂಕು ವಕೀಲರ ಸಂಘಕ್ಕೆ ಚುನಾವಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT