ಜಗಳೂರು: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ ಕುರಿತು ಶುಕ್ರವಾರ ನಡೆದ ಸಭೆಗೆ ಬಹುತೇಕ ಅಧಿಕಾರಿಗಳು ಹಾಗೂ ವ್ಯಾಪಾರಿಗಳು ಗೈರಾಗಿದ್ದನ್ನು ವಿರೋಧಿಸಿ ರೈತ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಭೆಗೆ ಅನಾರೋಗ್ಯದ ಕಾರಣ ತಹಶೀಲ್ದಾರ್ ಅವರೇ ಗೈರಾಗಿದ್ದರು. ಕೆಲವು ವ್ಯಾಪಾರಿಗಳು ಸಭೆಗೆ ಆಗಮಿಸದಿರುವುದನ್ನು ಖಂಡಿಸಿ ರೈತ ಮುಖಂಡರು ಸಭೆ ಬಹಿಷ್ಕರಿಸಿ ಪ್ರತಿಭಟಿಸಿದರು.

ತಹಶೀಲ್ದಾರ್ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಸಭೆ ನಡೆಯಬೇಕು ಎಂದು ಪಟ್ಟು ಹಿಡಿದ ರೈತರು, ತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅವರು ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮುಖಂಡರ ಮನವೊಲಿಸಲು ಪ್ರಯತ್ನಿಸಿದರು.

‘ಅನಾರೋಗ್ಯದ ಕಾರಣ ಆಸ್ಪತ್ರೆಗೆ ಹೋಗಿದ್ದೆ. ರಸಗೊಬ್ಬರ, ಬಿತ್ತನೆಬೀಜ ವಿತರಣೆ ಕುರಿತು ಸಮಗ್ರ ಮಾಹಿತಿ ನೀಡಲು ಸಂಬಂಧಿಸಿದ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ತಮ್ಮ ಬೇಡಿಕೆಯಂತೆ ಮತ್ತೊಂದು ದಿನಾಂಕ ನಿಗದಿಗೊಳಿಸಿ ಕೃಷಿ ಇಲಾಖೆ ಜಂಟಿ ನಿರ್ದೇಶಕರನ್ನು ಆಹ್ವಾನಿಸಿ ಸಭೆ ಕರೆಯಲಾಗುವುದು’ ಎಂದು ಕಲೀಂ ಉಲ್ಲಾ ಭರವಸೆ ನೀಡಿದರು.

ಖಾಸಗಿ ರಸಗೊಬ್ಬರ, ಬಿತ್ತನೆಬೀಜ ಮಾರಾಟ ಅಂಗಡಿ ಮಾಲೀಕರ ಸಂಘದ ಪದಾಧಿಕಾರಿಗಳು, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ರೈತಪರ ಸಂಘಟನೆಗಳ ಮುಖಂಡರು, ಪಿಎಸಿಎಸ್ ಸಿಇಒಗಳು ಭಾಗವಹಿಸಿದ್ದರು. ರೈತ ಸಂಘದ ವಾಸುದೇವ ಮೇಟಿ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಗುಮ್ಮನೂರು ಬಸವರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಭರಮಸಮುದ್ರ ಕುಮಾರ್, ಮುಖಂಡರಾದ ಆರ್. ಓಬಳೇಶ್, ಕಿರಣ್, ಸೂರಯ್ಯ, ಸತ್ಯಮೂರ್ತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರಭುಶಂಕರ್, ವರ್ತಕರಾದ ಕೆಚ್ಚೇನಹಳ್ಳಿ ಸಿದ್ದೇಶ್, ಜೀವಣ್ಣ, ಪಿಎಸಿಎಸ್ನ ಸಿಇಒ ಬೊಮ್ಮಲಿಂಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-390598718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.