ಜಗಳೂರು: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮರ್ಪಕ ಹಾಗೂ ಪಾರದರ್ಶಕವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಬೇಕು. ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರೈತ ಸಂಘಟನೆಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ಪರಿಕರ ಅಂಗಡಿ ಮಾಲೀಕರ ಜೊತೆ ಮಂಗಳವಾರ ನಡೆದ ರೈತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ಕಳೆದ ವರ್ಷ ಎದುರಾದ ರಸಗೊಬ್ಬರ ಅಭಾವ ಮರುಕಳಿಸದಂತೆ ಅಧಿಕಾರಿಗಳು, ವರ್ತಕರು ಮುಂಜಾಗ್ರತೆ ವಹಿಸಬೇಕು. ತಾಲ್ಲೂಕಿನ 27 ಕೃಷಿ ಪತ್ತಿನ ಸಹಕಾರ ಸಂಘಗಳಿಗೂ ರಸಗೊಬ್ಬರ ಮಾರಾಟ ಪ್ರಕ್ರಿಯೆಗೆ ಅಗತ್ಯ ತರಬೇತಿ, ಪರವಾನಗಿ ನೀಡಬೇಕು. ರಸಗೊಬ್ಬರ ಮಾರಾಟಕ್ಕೆ ಲಿಂಕ್ ಮಾಡಿಸುವ ಪ್ರಕ್ರಿಯೆ ತಪ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಗೌರಿಪುರ ಗ್ರಾಮದ ಬಳಿ 220 ಕೆ.ವಿ. ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಕೊಣಚಗಲ್ ಬಳಿ 5 ಎಕರೆ ಪ್ರದೇಶದಲ್ಲಿ ₹10 ಕೋಟಿ ವೆಚ್ಚದಲ್ಲಿ ರೈತರು ಬೆಳೆಗಳ ಸಂರಕ್ಷಣೆಗಾಗಿ ಶೀತಲ ಶೇಖರಣಾ ಘಟಕ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

‘ಇಲ್ಲಿನ ರಾಗಿ ಖರೀದಿ ಕೇಂದ್ರದಲ್ಲಿ ಈ ಹಿಂದೆ ಕೆಲವರು ಭಾರಿ ಹಗಲು ದರೋಡೆ ನಡೆಸಿದ್ದರು. ರೈತ ಸಂಘಟನೆಗಳು ಆಗ ಎಲ್ಲಿ ಹೋಗಿದ್ದವು? ಬೇರೆಯವರ ಆಡಳಿತಾವಧಿಯಲ್ಲಿ ನಡೆದಿದ್ದ ಅಕ್ರಮಗಳನ್ನು ಸರಿಪಡಿಸಿ, ರಾಗಿ ಖರೀದಿ ಹಣ ಕೊಡಿಸಿದ್ದೇನೆ. ಶ್ರಮವಹಿಸಿ ರಾಗಿ ಖರೀದಿ ಕೇಂದ್ರ ತಂದಿದ್ದೇನೆ’ ಎಂದು ಹೇಳಿದರು.

‘ತಾಲ್ಲೂಕಿನ 8 ಕೃಷಿ ಪತ್ತಿನ ಸಹಕಾರ ಸಂಘಗಳು ರಸಗೊಬ್ಬರ ಮಾರಾಟಕ್ಕೆ ಪರವಾನಗಿ ಪಡೆದಿವೆ. ರೈತರು ಜೀವಾಮೃತ ಪದ್ಧತಿ ಅಳವಡಿಸಿಕೊಂಡು ಸಾವಯವ ಗೊಬ್ಬರ ಬಳಕೆ ಮಾಡಲು 194 ಕೃಷಿ ಸಖಿಯರ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ ತಿಳಿಸಿದರು.

ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಿ, ಸಹಾಯಕ ನಿರ್ದೇಶಕಿ ಶ್ವೇತಾ, ತಹಶೀಲ್ದಾರ್ ಮಂಜಾನಂದ, ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಸಿದ್ದೇಶ್, ವೀರೇಶ್, ಜೀವಣ್ಣ, ಪಿಎಸಿಎಸ್ನ ಸಿಇಒ ಬೊಮ್ಮಲಿಂಗಪ್ಪ, ರೈತ ಸಂಘಟನೆಯ ಕುಮಾರ, ಚಿರಂಜೀವಿ, ಸತೀಶ್, ರಾಜು, ಸೂರಜ್ಜ, ಪೊಲೀಸ್ ಇನ್ಸ್ಪೆಕ್ಟರ್ ಸಿದ್ರಾಮಯ್ಯ, ಕೃಷಿ ಅಧಿಕಾರಿ ಜೀವಿತಾ ಹಾಗೂ ರೈತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-1738202133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.