ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಗೋಡು ಜಯಸಿಂಹಗೆ ಪರಿಷತ್ ಟಿಕೆಟ್ ನೀಡಲು ಆಗ್ರಹ

Published 26 ಮೇ 2024, 14:11 IST
Last Updated 26 ಮೇ 2024, 14:11 IST
ಅಕ್ಷರ ಗಾತ್ರ

ಜಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹನುಮಂತಾಪುರ ಶಿವಕುಮಾರ್ ಒತ್ತಾಯಿಸಿದರು.ಶ್ರೀ

ಪಟ್ಟಣದಲ್ಲಿ ಭಾನುವಾರ ಅಸಗೋಡು ಜಯಸಿಂಹ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಜಯಸಿಂಹ ಅವರು 1972ರಿಂದ ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ನಿರಂತರ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ವಿವಿಧ ಚುನಾವಣೆಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ. ಅವರ ಪಕ್ಷ ನಿಷ್ಠೆ, ಪ್ರಾಮಾಣಿಕತೆ ಪರಿಗಣಿಸಿ ಜೂನ್ 13 ರಂದು ನಡೆಯಲಿರುವ ಮೇಲ್ಮನೆ ಚುನಾವಣೆಯಲ್ಲಿ ಟಿಕೆಟ್ ನೀಡಿ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್ , ಕೆಪಿಸಿಸಿ ಎಸ್‌ಸಿ ಘಟಕದ ಸದಸ್ಯ ಸಿ.ತಿಪ್ಪೇಸ್ವಾಮಿ, ಮುಖಂಡರಾದ ಹಟ್ಟಿ ತಿಪ್ಪೇಸ್ವಾಮಿ, ವಾಲಿಬಾಲ್ ತಿಮ್ಮಾರೆಡ್ಡಿ, ಪಾಲನಾಯಕನ ಕೋಟೆ ಓಬಣ್ಣ, ಪ್ರಕಾಶ್ ರೆಡ್ಡಿ, ಪುಟ್ಟಣ್ಣ, ಚಿತ್ತಣ್ಣ, ಬಿ.ಮಹೇಶ್ವರಪ್ಪ, ಜಗಳೂರಯ್ಯ, ಸುಧೀರ್ ರೆಡ್ಡಿ, ಚಂದ್ರಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT