ಜಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದ ಉರುಸ್ ಉತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಪಟ್ಟಣದ ನಿವಾಸಿ ಐ.ಎಂ. ಫಯಾಜ್ ಮಹಮ್ಮದ್ (48) ಅವರು ಶನಿವಾರ ತೀವ್ರ ಬಿಸಿಲಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಆದೋನಿಯ ಗುಡಿಕಲ್ ದರ್ಗಾದ ಉರುಸ್ ಉತ್ಸವಕ್ಕೆ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶುಕ್ರವಾರ ಅವರು ತೆರಳಿದ್ದರು. ಶನಿವಾರ ವಾಪಸಾಗುತ್ತಿದ್ದರು. ಆದರೆ ಆದೋನಿ ಪಟ್ಟಣದಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಇದ್ದಕ್ಕಿದ್ದಂತೆ ತೀವ್ರ ಅಸ್ವಸ್ಥರಾದರು. ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಅವರು ಬದುಕುಳಿಯಲಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಪಟ್ಟಣದ ನಿವೃತ್ತ ಶಿಕ್ಷಕ ಇಬ್ರಾಹಿಂ ಸಾಬ್ ಅವರ ಪುತ್ರ ಫಯಾಜ್ ಅವರ ಅಂತ್ಯಕ್ರಿಯೆಯನ್ನು ಭಾನುವಾರ ಪಟ್ಟಣದಲ್ಲಿ ನಡೆಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-43-2011521794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.