ಜಗಳೂರು: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಪರ ಲಾಬಿ ನಡೆಸುತ್ತಿದೆ. ಈ ಮೂಲಕ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ಹುನ್ನಾರ ನಡೆಸುತ್ತಿದೆ’ ಎಂದು ಎಐಟಿಯುಸಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮಾದಿಹಳ್ಳಿ ಮಂಜುನಾಥ್ ಆರೋಪಿಸಿದರು.

ತಾಲ್ಲೂಕಿನ ಬಿದರಕೆರೆ ಗ್ರಾಮದಲ್ಲಿ ಎಐಟಿಯುಸಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಜನವಿರೋಧಿ ಆರ್ಥಿಕ ನೀತಿಗಳಿಂದ ನಿರುದ್ಯೋಗ ಹೆಚ್ಚುತ್ತದೆ. ದೇಶದ ಸಂಪತ್ತು ಜನರಿಗೆ ಸಮಾನವಾಗಿ ಹಂಚಿಕೆಯಾಗಬೇಕಿದೆ. ‘ಓವರ್ ಟೈಮ್’ ಹೆಸರಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಕಾನೂನು ಪ್ರಕಾರ ಕಾರ್ಮಿಕರಿಗೆ 8 ಗಂಟೆ ಕೆಲಸ, 8 ಗಂಟೆ ವಿಶ್ರಾಂತಿ, 8 ಗಂಟೆ ಸಾಮಾಜಿಕ ಜೀವನಕ್ಕೆ ಅವಕಾಶ ನೀಡಬೇಕು. ಆದರೆ ಸರ್ಕಾರಗಳು ಬಂಡವಾಳಶಾಹಿಗಳ ಪೋಷಣೆ ಮಾಡುವ ಮೂಲಕ ಕಾರ್ಮಿಕರ ಮೇಲೆ ಅವ್ಯಾಹತವಾಗಿ ಶೋಷಣೆ ನಡೆಸುತ್ತಿವೆ’ ಎಂದು ಆರೋಪಿಸಿದರು.

‘ತಾಲ್ಲೂಕಿನಲ್ಲಿ ಮಹಿಳೆಯರಿಗಾಗಿ ಗಾರ್ಮೆಂಟ್ಸ್ ಕೈಗಾರಿಕೆ ಸ್ಥಾಪಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ಒದಗಿಸಬೇಕು. ಯುವಸಮೂಹಕ್ಕೆ ವೃತ್ತಿಪರ ಡಿಪ್ಲೊಮಾ ಕಾಲೇಜು ತೆರೆಯಬೇಕು. ಉನ್ನತ ಶಿಕ್ಷಣಕ್ಕಾಗಿ ಸ್ನಾತಕೋತ್ತರ ಪದವಿ ಕೇಂದ್ರ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

‘ತಾಲ್ಲೂಕಿನಲ್ಲಿ 20,000ಕ್ಕೂ ಅಧಿಕ ಕಾರ್ಮಿಕರು ಲೇಬರ್ ಕಾರ್ಡ್ ಹೊಂದಿದ್ದಾರೆ. ಸರ್ಕಾರದ ಕಿಟ್, ಸಹಾಯಧನ, ಆರೋಗ್ಯ ಸೌಲಭ್ಯಗಳಿಗಾಗಿ ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ ಸೈಬರ್ ಕೇಂದ್ರಗಳ ಮೂಲಕ ನಕಲಿ ಕಾರ್ಮಿಕರು ಕಾರ್ಡ್ಗಳ ದುರುಪಯೋಗ ಪಡೆಯುತ್ತಿದ್ದು, ಸರ್ಕಾರ ಕಡಿವಾಣ ಹಾಕಬೇಕಿದೆ’ ಎಂದು ಕಟ್ಟಡ ಕಾರ್ಮಿಕರ ಸಂಘಟನೆ ಪ್ರಧಾನ ಕಾರ್ಯದರ್ಶಿ ಗೊಲ್ಲರಹಟ್ಟಿ ತಿಪ್ಪೇಸ್ವಾಮಿ ಒತ್ತಾಯಿಸಿದರು.

‘ಕಾರ್ಮಿಕರ ವಿಮಾ ಯೋಜನೆಯಡಿ ವರ್ಷಕ್ಕೆ ₹450 ಪಾವತಿಸಿ ವಿಮಾ ಸೌಲಭ್ಯ ಪಡೆದುಕೊಳ್ಳಲು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕಾರ್ಮಿಕರ ದಿನಾಚರಣೆ ಸಂಭ್ರಮವಾಗಬೇಕು’ ಎಂದು ಬಿದರಕೆರೆ ಗ್ರಾ.ಪಂ ಪಿಡಿಒ ಅನಿಲ್ ಕುಮಾರ್ ತಿಳಿಸಿದರು.

ಸಾಹಿತಿ ನಿಬಗೂರು ರಾಜಪ್ಪ, ಪಿಡಿಒ ಮರುಳಸಿದ್ದಪ್ಪ, ಎಐಟಿಯುಸಿ ಮುಖಂಡರಾದ ಏಕಾಂತಪ್ಪ, ಲಿಂಗರಾಜ್, ನಾಗರಾಜ್, ಶಿವಣ್ಣ, ಮೈಲಾರಿ, ಎಐವೈಎಫ್ ಮುಖಂಡ ತೋರಣಗಟ್ಟೆ ಹರೀಶ್, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಬಿ.ಟಿ.ಪುಷ್ಪಲತಾ, ಶೃತಿ, ಮಾನಸ, ಮಂಜುಳಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.