ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಕುವಿನಿಂದ ದಾಳಿ; ಆತಂಕದಲ್ಲಿ ಗೌರೀಪುರ ಗ್ರಾಮಸ್ಥರು

Published 19 ಡಿಸೆಂಬರ್ 2023, 16:12 IST
Last Updated 19 ಡಿಸೆಂಬರ್ 2023, 16:12 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಗೌರೀಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ನಾಲ್ವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದು, ಗ್ರಾಮದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.

ಕೆಲವು ತಿಂಗಳ ಹಿಂದೆ ಗ್ರಾಮದಲ್ಲಿ ಆರ್‌ಟಿಐ ಕಾರ್ಯಕರ್ತ ರಾಮಕೃಷ್ಣ ಅವರ ಹತ್ಯೆ ಘಟನೆ ನಡೆದಿತ್ತು. ಸೋಮವಾರ ರಾತ್ರಿ ರಾಮಕೃಷ್ಣ ಅವರ ಸಹೋದರ ಹೇಮಂತ್ ಚಾಕುವಿನಿಂದ ಬಸವನಗೌಡ ಹಾಗೂ ಆತನ ಕುಟುಂಬದ ಸದಸ್ಯರ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಹೇಮಂತ್ ಹಾಗೂ ಆತನ ತಾಯಿ ಬೊಮ್ಮಕ್ಕ ವಿರುದ್ಧ ಕೊಲೆ ಯತ್ನ ದೂರು ದಾಖಲಿಸಲಾಗಿದೆ. ಘಟನೆ ಕಾರಣ ಗೌರೀಪುರ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT