ಜಗಳೂರು: ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನ ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಸಮರ್ಪಕ ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರುಸೇನೆಯ ವಾಸುದೇವ ಮೇಟಿ ಬಣದಿಂದ ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಕಾರ್ಯಕರ್ತರು ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದರು.

ಮಧ್ಯವರ್ತಿಗಳ ಹಾವಳಿಯಿಂದ ಖಾಸಗಿ ಕೃಷಿ ಉತ್ಪನ್ನ ಕೇಂದ್ರಗಳಲ್ಲಿ ರಾಸಾಯನಿಕ ಗೊಬ್ಬರದ ಕೃತಕ ಅಭಾವ ಸೃಷ್ಟಿಯಾಗದಂತೆ ತಡೆಯಬೇಕು. ಕಳಪೆ ಬಿತ್ತನೆ ಬೀಜ ವಿತರಿಸುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಂಆರ್ಪಿಗಿಂತ ಅಧಿಕ ದರಕ್ಕೆ ಮಾರಾಟ ಮಾಡದಂತೆ ನಿಗಾ ವಹಿಸಬೇಕು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗುಮ್ಮನೂರು ಬಸವರಾಜ್ ಒತ್ತಯಿಸಿದರು.

ತಾಲ್ಲೂಕಿನಾದ್ಯಂತ ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ, ಯೂರಿಯಾ ಗೊಬ್ಬರ ವಿತರಿಸಬೇಕು. ಕಳೆದ ವರ್ಷದಂತೆ ಯೂರಿಯಾ ಗೊಬ್ಬರ ಅಭಾವ ಸೃಷ್ಟಿಸಿದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಭರಮಸಮುದ್ರ ಕುಮಾರ್, ಪದಾಧಿಕಾರಿಗಳಾದ ಸೂರಜ್ಜ, ಮಹಾಂತೇಶ್, ಶಿವಕುಮಾರ್, ಕೃಷ್ಣಪ್ಪ, ಗುಂಡಪ್ಪ, ಮಾರಪ್ಪ, ಈರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-43-862596793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.