ಜಗಳೂರು: ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಅಜ್ಮತ್ (49) ಅವರು ಕೋವಿಡ್ನಿಂದ ಬುಧವಾರ ಮೃತಪಟ್ಟಿದ್ದಾರೆ.

ಐದು ದಿನಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಅಜ್ಮತ್ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇರುವುದರಿಂದ ಶ್ವಾಸಕೋಶದ ತೀವ್ರ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಕೋವಿಡ್ ವಿರುದ್ಧದ ಸಮರದಲ್ಲಿ ಅಜ್ಮತ್ ಅವರು ಮಂಚೂಣಿ ಹೋರಾಟಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂತಹ ನಿಸ್ವಾರ್ಥ ಸೇನಾನಿಗಳು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವುದರಿಂದಲೇ ಸಾವಿರಾರು ರೋಗಿಗಳ ಜೀವ ಉಳಿಯುತ್ತಿವೆ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಅಜ್ಮತ್ ಅವರ ಕುಟುಂಬಕ್ಕೆ ಸಿಗಬೇಕಾದ ಪರಿಹಾರ ಮತ್ತು ಸವಲತ್ತುಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.