ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಜಗಳೂರು: ಒಂದೇ ಮಳೆಯಲ್ಲಿ ತುಪ್ಪದಹಳ್ಳಿ ಕೆರೆಗೆ 10 ಅಡಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಗಳೂರು: ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ ಸುರಿದ ಮಳೆಗೆ ಬಹುತೇಕ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿದ್ದು, ಕೆರೆಕಟ್ಟೆಗಳಿಗೆ ಸಾಕಷ್ಟು ನೀರು ಹರಿದು ಬಂದಿದೆ.

ಬಿಳಿಚೋಡು ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ತುಪ್ಪದಹಳ್ಳಿ ಕೆರೆ, ಬಿಳಿಚೋಡು ಕೆರೆ ಹಾಗೂ ಮಾದೇನಹಳ್ಳಿ ಕೆರೆಗಳಿಗೆ ನೀರು ಹರಿಯುತ್ತಿದೆ. ಜಿನಿಗಿ ಹಳ್ಳ ತುಂಬಿ ಹರಿಯುತ್ತಿದೆ. ತಾಲ್ಲೂಕಿನ ಅತ್ಯಂತ ದೊಡ್ಡದಾದ ಕೆರೆಗಳಲ್ಲಿ ಒಂದಾದ ತುಪ್ಪದಹಳ್ಳಿ ಕೆರೆಗೆ 10 ಅಡಿಗೂ ಹೆಚ್ಚು ನೀರು ಬಂದಿದೆ.

ಭಾರಿ ಮಳೆಯಿಂದಾಗಿ ಬಿಳಿಚೋಡು ಸಮೀಪದ ಬೆಸ್ಕಾ ಇಲಾಖೆಗೆ ಸೇರಿದ ವಿದ್ಯುತ್ ಸ್ಥಾವರಕ್ಕೆ ನೀರು ನುಗ್ಗಿದೆ. ಎರಡು ಮೋಟಾರ್‌ಗಳ ಸಹಾಯದಿಂದ ನೀರನ್ನು ಹೊರಕ್ಕೆ ಪಂಪ್ ಮಾಡಿದ್ದು, ಯಾವುದೇ ಅನಾಹುತವಾಗಿಲ್ಲ.

ಪಟ್ಟಣದ ರಂಗನಾಥ ಬಡಾವಣೆ ಸೇರಿ ತಗ್ಗು ಪ್ರದೇಶದಲ್ಲಿರುವ ವಿವಿಧ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಶನಿವಾರ ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 10 ಮನೆಗಳು ಕುಸಿದಿದ್ದು, ಹೆಚ್ಚಿನ ಹಾನಿಯಾಗಿಲ್ಲ ಎಂದು ತಹಶೀಲ್ದಾರ್ ನಾಗವೇಣಿ ತಿಳಿಸಿದ್ದಾರೆ.

69.5 ಮಿಮಿ ಮಳೆ: ತಾಲ್ಲೂಕಿನ ಮೂರು ಹೋಬಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸರಾಸರಿ 69.5 ಮಿ.ಮೀ. ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು