ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳೂರು: ಎತ್ತನಗಾಡಿಯಲ್ಲಿ ಮತದಾನದ ಜಾಗೃತಿ

Published 18 ಏಪ್ರಿಲ್ 2024, 6:32 IST
Last Updated 18 ಏಪ್ರಿಲ್ 2024, 6:32 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕು ಆಡಳಿತದ ವತಿಯಿಂದ ವಿಭಿನ್ನ ರೀತಿಯಲ್ಲಿ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಮಂಗಳವಾರ ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಬಸವನಕೋಟೆ ಗ್ರಾಮದಲ್ಲಿ ಅಧಿಕಾರಿಗಳು ಎತ್ತಿನಗಾಡಿ ಓಡಿಸುವ ಮೂಲಕ ಜಾಗೃತಿ ಮೂಡಿಸಿದರು.

‘ಸಂವಿಧಾನಬದ್ಧ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋದವರು ತಪ್ಪದೇ ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಶ್ರೀಕಂಠರಾಜ ಅರಸ್ ಮನವಿ ಮಾಡಿದರು.

‘ಗ್ರಾಮೀಣ ಭಾಗದಲ್ಲಿ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ‘ನನ್ನ ನಡೆ ಮತಗಟ್ಟೆ ಕಡೆ’ ಅಭಿಯಾನದ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ವಯೋವೃದ್ದರಿಗೆ, ಅಂಗವಿಕಲರಿಗೆ ವಿಶೇಷವಾಗಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಯುವಕರು ಜಾಗೃತರಾಗಿ ಗ್ರಾಮದಲ್ಲಿನ ಮತದಾರರಿಗೆ ಕಡ್ಡಾಯ ಮತದಾನಕ್ಕೆ ಪ್ರೋತ್ಸಾಹಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಬೀರೇಂದ್ರಕುಮಾರ್ ಸಲಹೆ ನೀಡಿದರು.

ಪಿಡಿಒ ತಿಮ್ಮೇಶ್, ಬಿಲ್ ಕಲೆಕ್ಟರ್ ಕರಿ ಬಸಪ್ಪ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT