ಜಗಳೂರು: ತಾಲ್ಲೂಕಿನ ವಿವಿಧೆಡೆ ನಡೆದಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಶಿವಕುಮಾರ್ ಅವರ ಪತ್ನಿ ಕಾವೇರಿ (20) ಈಚೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಹಲವು ದೈಹಿಕ ರೋಗಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

ಕೊಳವೆಬಾವಿ ಆಪರೇಟರ್ ಆತ್ಮಹತ್ಯೆ: ತಮಿಳುನಾಡು ಮೂಲದ ಕೊಳವೆಬಾವಿ ಆಪರೇಟರ್ ದಿಲೀಪ್ ಪೂಮಾಲರ್ (34) ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ಬಳಿ ಈಚೆಗೆ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.

ತಮಿಳುನಾಡು ಜಿಲ್ಲೆಯ ನಾಮಕ್ಕಲ್ ಜಿಲ್ಲೆಯ ರಾಶಿಪುರಂ ತಾಲ್ಲೂಕಿನ ಈ ವ್ಯಕ್ತಿ 10 ವರ್ಷಗಳಿಂದ ಕರ್ನಾಟಕದ ವಿವಿಧೆಡೆ ಕೊಳವೆಬಾಯಿ ಕೊರೆಯುವ ಯಂತ್ರ ಸಾಗಿಸುವ ಲಾರಿಯಲ್ಲಿ ಡ್ರಿಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-43-30202937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.