ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ: ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ

Published 24 ಜೂನ್ 2024, 14:24 IST
Last Updated 24 ಜೂನ್ 2024, 14:24 IST
ಅಕ್ಷರ ಗಾತ್ರ

ಚನ್ನಗಿರಿ: ‘ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ರಾಜ್ಯದ ಜನರಿಗೆ ನೀಡಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಜನರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಥಳದಲ್ಲಿಯೇ ಪರಿಹಾರ ನೀಡಲು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.

ಪಟ್ಟಣದ ರುಕುಮಾಯಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತದಿಂದ ಸೋಮವಾರ ನಡೆದ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

‘ಈ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ತಿಂಗಳಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಅಡಿ ₹ 209.72 ಕೋಟಿಯನ್ನು ಜಮಾ ಮಾಡಲಾಗಿದೆ. ಇದುವರೆಗೆ ಈ ಕ್ಷೇತ್ರದ 67 ಗ್ರಾಮಗಳಲ್ಲಿ ಗ್ರಾಮ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ ರೀತಿ 16,398 ಫಲಾನುಭವಿಗಳಿಗೆ ₹ 12.64 ಕೋಟಿ ಬೆಳೆ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ’ ಎಂದು ಹೇಳಿದರು.

‘ಕ್ಷೇತ್ರದ ಜನರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ಕಲ್ಪಿಸುವಲ್ಲಿ ತಾಲ್ಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೆಯೇ ಇನ್ನು ಮುಂದೆ ಪ್ರತಿ ಸೋಮವಾರ ಎಲ್ಲ ಇಲಾಖೆಗಳ ಮುಖ್ಯಸ್ಥರು ಕಚೇರಿಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ನಾನು ಕೂಡಾ ತಾಲ್ಲೂಕು ಕಚೇರಿಯ ನಮ್ಮ ಜನಸಂಪರ್ಕ ಕಚೇರಿಯಲ್ಲಿ ಇಡೀ ದಿನ ಲಭ್ಯವಿರುತ್ತೇನೆ’ ಎಂದು ಹೇಳಿದರು.

ತಹಶೀಲ್ದಾರ್ ಪಿ.ಎಸ್. ಎರ‍್ರಿಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ.ಉತ್ತಮ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಬಿಇಒ ಎಲ್.ಜಯಪ್ಪ, ಪುರಸಭೆ ಸದಸ್ಯರಾದ ಜಿ.ನಿಂಗಪ್ಪ, ಸೈಯದ್ ಗೌಸ್ ಪೀರ್, ಪಟ್ಲಿ ನಾಗರಾಜ್, ಪರಮೇಶ್ ಪಾರಿ, ಗಾದ್ರಿ ರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT