ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಆಸ್ಪತ್ರೆ ಎದುರು ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಉದ್ಘಾಟನೆ 

Published 24 ಮೇ 2023, 14:04 IST
Last Updated 24 ಮೇ 2023, 14:04 IST
ಅಕ್ಷರ ಗಾತ್ರ

ಹೊನ್ನಾಳಿ: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಕ್ಕೆ ಬೇಡಿಕೆ ಹೆಚ್ಚಾದ ಕಾರಣ ಮತ್ತೊಂದು ಜನೌಷಧಿ ಕೇಂದ್ರ ಸ್ಥಾಪನೆಯಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಬುಧವಾರ ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದ ವಾಣಿಜ್ಯ ಸಂಕೀರ್ಣದಲ್ಲಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಬೇಡಿಕೆಯ ಆಧಾರದಲ್ಲಿ ಮತ್ತೊಂದು ಕೇಂದ್ರಕ್ಕೆ ಅನುಮತಿ ದೊರೆತಿದೆ ಎಂದು ಅವರು ಹೇಳಿದರು.

ಜನೌಷಧಿ ಕೇಂದ್ರ ನಡೆಸಲು ಅನುಮತಿ ಪಡೆದುಕೊಂಡಿರುವ ಜಿ. ಸೌಮ್ಯ ಶಿವಪ್ರಸಾದ್ ಅವರು ಇದೇ ಸಂದರ್ಭದಲ್ಲಿ ಮಾತನಾಡಿ, ‘ರಕ್ತದೊತ್ತಡ, ಮಧುಮೇಹ, ಕಾರ್ಡಿಯಾ ಸೇರಿದಂತೆ ಎಲ್ಲ ರೋಗಗಳಿಗೂ ಗುಣಮಟ್ಟದ ಔಷಧಿಗಳು ಅತಿ ಕಡಿಮೆ ದರದಲ್ಲಿ ಲಭ್ಯವಾಗುತ್ತವೆ. ಬಡಜನರಿಗೆ ಕೈಗೆಟುಕುವ ಬೆಲೆಗೆ ಔಷಧಿಗಳನ್ನು ವಿತರಿಸುವುದೇ ನಮ್ಮ ಉದ್ದೇಶ’ ಎಂದರು.

ಪ್ರತಿದಿನ ಬೆಳಿಗ್ಗೆ 8ರಿಂದ ರಾತ್ರಿ 9ರವರೆಗೂ ಈ ಜನೌಷಧಿ ಕೇಂದ್ರ ಸಾರ್ವಜನಿಕರ ಸೇವೆಗೆ ಲಭ್ಯವಿದೆ’ ಎಂದರು.

ಉದ್ಘಾಟನೆ ಸಂದರ್ಭದಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಅವರ ಪುತ್ರ ಪ್ರದೀಪ್ ಗೌಡ ಭೇಟಿ ನೀಡಿ ಶುಭ ಕೋರಿದರು.

ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಉದ್ಘಾಟನೆಯಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ 
ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಉದ್ಘಾಟನೆಯಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT