ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀತ ಪದ್ದತಿ ನಿರ್ಮೂಲನೆಗೆ ಕೈಜೋಡಿಸಿ: ರಾಜೇಶ್ವರಿ ಎನ್. ಹೆಗಡೆ

Published 10 ಫೆಬ್ರುವರಿ 2024, 7:56 IST
Last Updated 10 ಫೆಬ್ರುವರಿ 2024, 7:56 IST
ಅಕ್ಷರ ಗಾತ್ರ

ದಾವಣಗೆರೆ: ‘ಜೀತ ಪದ್ದತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಲಾಗಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದೆ. ಇದನ್ನು ಬುಡ ಸಮೇತ ಕಿತ್ತೊಗೆಯಲು ಎಲ್ಲರೂ ಸಹಕಾರ ನೀಡಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಜೀತ ಪದ್ದತಿ ರದ್ದತಿ ಕಾಯ್ದೆಯನ್ನು 1976ರಲ್ಲಿ ದೇಶದಾದ್ಯಂತ ಜಾರಿ ಮಾಡಲಾಯಿತು. ಜೀತ ಪದ್ದತಿ ಎಲ್ಲಿ ಇದೆ ಎಂಬುದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಜೀತಕ್ಕೊಳಗಾದವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಸಲಹೆ ನೀಡಿದರು.

‘ಯಾವುದೇ ಒಬ್ಬ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಅವನನ್ನು ಕೂಡಿಟ್ಟು ಕೆಲಸವನ್ನು ಮಾಡಿಸಿರುವುದು  ಗಮನಕ್ಕೆ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಇರಬೇಕು. ಜೀತಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕೆಂಬುದು ಪ್ರತಿಯೊಬ್ಬರ ಧ್ಯೇಯ ಆಗಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

‘ಜೀತ ಪದ್ಧತಿ ನಿರ್ಮೂಲನೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಸರ್ಕಾರ ಜನರ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಸಲಹೆ ನೀಡಿದರು.

 ಹಿರಿಯ ಸಿವಿಲ್ ನ್ಯಾಯಾಧೀಶರು ಮಹಾವೀರ ಕರೆಣ್ಣವರ, ತಹಶೀಲ್ದಾರ್ ಅಶ್ವಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ‌ಮಲ್ಲನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಿಕಿ ವಾಸಂತಿ ಉಪ್ಪಾರ್, ಡಿಡಿಪಿಐ ಜಿ. ಕೊಟ್ರೇಶ್, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT