ಗುರುವಾರ , ಆಗಸ್ಟ್ 11, 2022
26 °C
ಜುಲೈ 12ರಂದು ನಾಲ್ವರಿಗೆ ಪ್ರಶಸ್ತಿ ಪ್ರದಾನ

ಸಿದ್ದರಾಮಯ್ಯಗೆ ‘ಜಯದೇವಶ್ರೀ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ 65ನೇ ಸ್ಮರಣೋತ್ಸವದ ಅಂಗವಾಗಿ ನೀಡಲಾಗಿರುವ ‘ಜಯದೇವ ಶ್ರೀ ಪ್ರಶಸ್ತಿ’ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

‘ಶೂನ್ಯಪೀಠ ಅಲ್ಲಮ ಪ್ರಶಸ್ತಿ’ಗೆ ವಿಧಾನಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ‘ಶೂನ್ಯಪೀಠ ಚನ್ನಬಸವ ಪ್ರಶಸ್ತಿ’ಗೆ ಹರಿಹರದ ಸಾಹಿತಿ ಪ್ರೊ.ಎಚ್.ಎ. ಭಿಕ್ಷಾವರ್ತಿಮಠ, ‘ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ’ಗೆ ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ್ತಿ ಚೆನ್ನಮ್ಮ ಹಳ್ಳಿಕೇರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಾಖಾ ಮಠವಾದ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜಯದೇವ ಶ್ರೀ’ ಹಾಗೂ ‘ಶೂನ್ಯಪೀಠ ಅಲ್ಲಮ ಪ್ರಭು’ ಪ್ರಶಸ್ತಿಗಳು ತಲಾ ₹ 50,000, ಚನ್ನಬಸವ ಹಾಗೂ ಅಕ್ಕನಾಗಮ್ಮ ಪ್ರಶಸ್ತಿಗಳು ತಲಾ ₹ 25,000 ನಗದು ಹಾಗೂ ಫಲಕ ಒಳಗೊಂಡಿರುತ್ತವೆ. ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಜುಲೈ
12ರಂದು ದಾವಣಗೆರೆಯಲ್ಲಿ ನಡೆಯುವ ಸಾಧಕರ ಸಮಾವೇಶದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು