ದಕ್ಷಿಣ ಕ್ಷೇತ್ರದ 20 ವಾರ್ಡ್‌ಗಳಲ್ಲೂ ಸ್ಪರ್ಧೆ

7
ದಾವಣಗೆರೆ: ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮುಖಂಡ ಅಮಾನುಲ್ಲಾ ಖಾನ್‌

ದಕ್ಷಿಣ ಕ್ಷೇತ್ರದ 20 ವಾರ್ಡ್‌ಗಳಲ್ಲೂ ಸ್ಪರ್ಧೆ

Published:
Updated:

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ವಾರ್ಡ್‌ಗಳಲ್ಲಿ ಜೆಡಿಎಸ್‌ ಸ್ಪರ್ಧೆ ಮಾಡಲಿದ್ದು, ಕನಿಷ್ಠ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪಕ್ಷದ ಯುವ ಘಟಕದ ಅಧ್ಯಕ್ಷ ಜೆ. ಅಮಾನುಲ್ಲಾ ಖಾನ್‌ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ ಜಿಲ್ಲಾ ಕಚೇರಿಯಲ್ಲಿ ಭಾನುವಾರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ, ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ‘2007ರಲ್ಲಿ ಪಾಲಿಕೆಯ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆವು. ಆಗ ರಾಜ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಿದ್ದರು. ಈಗ ಮತ್ತೆ ಅದೇ ಸುವರ್ಣಕಾಲ ಜೆಡಿಎಸ್‌ ಪಾಲಿಗೆ ಒದಗಿ ಬಂದಿದೆ. ಹೀಗಾಗಿ, ಪಾಲಿಕೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರಲಿದೆ’ ಎಂದು ಹೇಳಿದರು.

ಈಗಾಗಲೇ ಪಾಲಿಕೆಯ ವಾರ್ಡ್‌ವಾರು ಮೀಸಲಾತಿ ಪ್ರಕಟಿಸಲಾಗಿದೆ. ಮೀಸಲಾತಿ ಪಟ್ಟಿ ಬಗ್ಗೆ ಚರ್ಚಿಸಿ, ಲೋಪಗಳಿದ್ದರೆ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಮುಖಂಡರು ಮಾಡಿಕೊಳ್ಳಬೇಕು ಎಂದರು. ಮೀಸಲಾತಿ ಅಂತಿಮಗೊಂಡ ನಂತರ ಮತ್ತೊಮ್ಮೆ ಸಭೆ ನಡೆಸಲಾಗುವುದು. ಮುಖಂಡರು, ಕಾರ್ಯಕರ್ತರ ಜತೆ ಚರ್ಚಿಸಿ, ದಕ್ಷಿಣ ಕ್ಷೇತ್ರದ ಎಲ್ಲಾ 20 ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಶ್ರಮವಹಿಸಿ, ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಗಣೇಶ್‌ ದಾಸಕರಿಯಪ್ಪ, ರಾಜ್ಯ ಕಾರ್ಯದರ್ಶಿ ಟಿ. ಅಸ್ಗರ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಚ್‌.ಸಿ. ಗುಡ್ಡಪ್ಪ, ಪ್ರಧಾನ ಕಾರ್ಯದರ್ಶಿ ದಾದಾಪೀರ್, ಎಚ್‌.ಸಿ. ಆಂಜನಪ್ಪ, ಕೆ. ಪಾಪಣ್ಣ, ಕಡತಿ ಆಂಜನಪ್ಪ, ಖಾದರ್‌ ಬಾಷಾ, ಯು.ಎಂ. ಮನ್ಸೂರ್‌ ಅಲಿ, ಮೌಲಾನಾ ಅಬ್ದುಲ್‌ ಮುನಾಫ್‌ ಖಾದ್ರಿ ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !