ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾನ ಜಾಗೃತಿಗೆ ‌ಜುಂಬಾ ನೃತ್ಯ

Published 3 ಮೇ 2024, 5:18 IST
Last Updated 3 ಮೇ 2024, 5:18 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಮತದಾನ ಜಾಗೃತಿಗಾಗಿ ಜುಂಬಾ ನೃತ್ಯ ಮಾಡಲಾಯಿತು.  

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್‌ ಬಿ. ಇಟ್ನಾಳ್‌ ಜುಂಬಾ ನೃತ್ಯ ಮಾಡಿ ಪ್ರೋತ್ಸಾಹಿಸಿದರು.

‘ಮೇ 7ರಂದು ಎಲ್ಲರೂ ತಪ್ಪದೇ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು. ಜುಂಬಾ ನೃತ್ಯ ಸ್ನಾಯುವಿನ ಶಕ್ತಿ, ಫಿಟ್‍ನೆಸ್‍ನೊಂದಿಗೆ ಅನಾರೋಗ್ಯವನ್ನು ತಡೆಗಟ್ಟುವ ಮತ್ತು ದೈಹಿಕ ಸಾಮರ್ಥ್ಯ ಹೆಚ್ಚಲಿದೆ. ಅದೇ ರೀತಿ ಎಲ್ಲರೂ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಲಿದೆ’ ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಹೇಳಿದರು.

‘ನಿಮ್ಮ ಮತ ನಿಮ್ಮ ಹಕ್ಕು, ನಿವೆಲ್ಲರೂ ತಪ್ಪದೇ ಮತದಾನ ಮಾಡಿ, ದೇಶದ ಅಭಿವೃದ್ದಿಗೆ ಕೈಜೋಡಿಸೋಣ’ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ‌ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಉಪ ಕಾರ್ಯದರ್ಶಿ ಕೃಷ್ಣ ನಾಯಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಡಿಡಿಪಿಐ ಕೊಟ್ರೇಶ್ ಜಿ., ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್, ತಹಶೀಲ್ದಾರ್ ಅಶ್ವತ್ ಎಂ.ಬಿ. ಇದ್ದರು.

ಕೆ.ಡಿ. ಡ್ಯಾನ್ಸ್ ಕಂಪನಿಯ ನೃತ್ಯಪಟುಗಳು ನೃತ್ಯ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT