ಸೋಮವಾರ, ನವೆಂಬರ್ 18, 2019
25 °C

ಬಾಲಕಿಯ ಅತ್ಯಾಚಾರ: ಆರೋಪಿಗೆ ಶಿಕ್ಷೆ

Published:
Updated:

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಬಾಲಕಿಯನ್ನು ಪುಸಲಾಯಿಸಿಕೊಂಡು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರಿನ ಯುವಕನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 45 ಸಾವಿರ ದಂಡ ವಿಧಿಸಿದೆ.

ಯಶವಂತ (23) ಶಿಕ್ಷೆಗೆ ಒಳಗಾದವನು. 2018ರಲ್ಲಿ ಪ್ರಕರಣ ನಡೆದಿತ್ತು. ಹೊನ್ನಾಳಿ ವೃತ್ತ ನಿರೀಕ್ಷಕ ರಮೇಶ್‌ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಎಸ್‌. ನಾಗಶ್ರೀ ಈ ಶಿಕ್ಷೆ ವಿಧಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಶೌಕ್‌ ಅಲಿ ಎಸ್‌.ಎಚ್‌.ಎಸ್‌. ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)