ಕಡರನಾಯ್ಕನಹಳ್ಳಿ: ಸಮೀಪದ ಎಕ್ಕೆಗೊಂದಿ-ಭಾನುವಳ್ಳಿ ಮಾರ್ಗದ ಕಾಂಕ್ರೀಟ್ ರಸ್ತೆಯಲ್ಲಿ ಕಬ್ಬಿಣದ ಸಲಾಕೆಗಳು ಮೇಲೆದ್ದಿದ್ದು, ವಾಹನ ಸವಾರರಿಗೆ ಸವಾಲೊಡ್ಡುತ್ತಿವೆ.

ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆಯುವ ಮುನ್ನವೇ ಸಿ.ಸಿ. ರಸ್ತೆ ದುಃಸ್ಥಿತಿಗೀಡಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ರಾಡ್ಗಳು ಕಾಣದೇ ಸಮಸ್ಯೆಯಾಗುತ್ತಿದೆ. ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಸೇರಿದಂತೆ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

‘ಎಕ್ಕೆಗೊಂದಿ– ನಂದಿಗುಡಿ ಮಾರ್ಗದಲ್ಲಿ ಭಾನುವಳ್ಳಿಯವರೆಗೆ ಕಾಂಕ್ರೀಟ್ ರಸ್ತೆ ಕಾಮಗಾರಿ ಮಾಡಲಾಗಿದೆ. ಅಂದಾಜು ₹ 13 ಕೋಟಿ ವೆಚ್ಚದ ಈ ಕಾಮಗಾರಿ ಕಳಪೆಯಾಗಿದೆ ಎಂದು ಸಾರ್ವಜನಿಕರು ಕಾಮಗಾರಿ ವೇಳೆಯೇ ದೂರಿದ್ದರು. ಅಧಿಕಾರಿಗಳು ಸರಿಯಾಗಿ ಮೇಲ್ವಿಚಾರಣೆ ಮಾಡದಿರುವುದಕ್ಕೆ ಗುತ್ತಿಗೆದಾರರು ಮನಬಂದಂತೆ ಕಾಮಗಾರಿ ಪೂರ್ಣಗೊಳಿಸಿದ್ದು, ಕಬ್ಬಿಣದ ರಾಡ್ಗಳು ರಸ್ತೆಯಿಂದ ಮೇಲೆದ್ದು ಕಾಣಿಸುತ್ತಿವೆ’ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎ.ಪರಮೇಶ್ವರಪ್ಪ ಮತ್ತು ಸ್ಥಳೀಯ ನಿವಾಸಿ ಎಸ್.ಬಿ. ಸಂತೋಷ್ ಆಕ್ರೋಶ ವ್ಯಕ್ತಪಡಿಸಿದರು.

‘ಕಳಪೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಅದನ್ನು ತಡೆಯುವಲ್ಲಿ ಲೋಕೋಪಯೋಗಿ ಇಲಾಖೆ ವಿಫಲವಾಗಿದೆ. ಸಂಬಂಧಪಟ್ಟವರು ಶೀಘ್ರವೇ ಗಮನ ಹರಿಸಿ ದುರಸ್ತಿ ಮಾಡದಿದ್ದರೆ ವಾಹನ ಸವಾರರಿಗೆ ಅಪಾಯ ಎದುರಾಗಲಿದೆ’ ಎಂದು ಅವರು ಹೇಳಿದರು.

‘ಸದ್ಯದಲ್ಲೇ ಕಾಂಕ್ರೀಟ್ ರಸ್ತೆಯನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಚೈತ್ರಾ ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-548139257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.