ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಬ ಸಮುದಾಯ: ಪಾದಯಾತ್ರೆ ಮುಗಿಸಿ ಮಠಕ್ಕೆ ಮರಳಿದ ಕಾಗಿನೆಲೆಶ್ರೀ

Last Updated 11 ಫೆಬ್ರುವರಿ 2021, 1:45 IST
ಅಕ್ಷರ ಗಾತ್ರ

ಹರಿಹರ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕಾಗಿನೆಲೆಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಮುಗಿಸಿದ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಬುಧವಾರ ಬೆಳ್ಳೂಡಿ ಕನಕ ಗುರುಪೀಠದ ಶಾಖಾ ಮಠಕ್ಕೆ ಮರಳಿದರು. ಭಕ್ತರು ಬೈಕ್‌ ರ‍್ಯಾಲಿ ಮೂಲಕ ಸ್ವಾಮೀಜಿಯನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ‘ಕುರುಬರಿಗೆ ಪರಿಶಿಷ್ಟ ಪಂಗಡದ ಮೀಸಲಾತಿಗೆ ಆಗ್ರಹಿಸಿ ಆರಂಭಿಸಿದ ಪಾದಯಾತ್ರೆ ಸಾರ್ಥಕವಾಗಿದೆ. ನಾವು ಹೊಸದಾಗಿ ಮೀಸಲಾತಿ ಕೇಳುತ್ತಿಲ್ಲ. ಈಗ ಇರುವ ಎಸ್‌.ಟಿ ಮೀಸಲಾತಿ ಪಟ್ಟಿಯಲ್ಲಿ ಕುರುಬ ಎಂಬ ಪದ ಬಿಟ್ಟು ಹೋಗಿದೆ. ಅದನ್ನು ಸೇರ್ಪಡೆ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿದೆ’ ಎಂದರು.

‘ಕುರುಬರಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಅಗತ್ಯವಿಲ್ಲ. ಒಂದು ವೇಳೆ ಕುಲಶಾಸ್ತ್ರ ಅಧ್ಯಯನ ಬೇಕು ಎಂದರೆ ಅದಕ್ಕೂ ಸಿದ್ಧ. ಈಗಾಗಲೇ ಕುಲಶಾಸ್ತ್ರ ಅಧ್ಯಯನ ಶೇ 90ರಷ್ಟು ಮುಕ್ತಾಯವಾಗಿದ್ದು, ಒಂದೆರಡು ತಿಂಗಳಲ್ಲಿ ಮುಕ್ತಾಯವಾಗಲಿದೆ’ ಎಂದು ಹೇಳಿದರು.

‘ಈಗ ಪಾದಯಾತ್ರೆ ಮುಕ್ತಾಯವಾಗಿದೆ. ಮುಂದಿನ ಹೋರಾಟ ಕುರಿತು ಸಮಿತಿಗಳ ಸಭೆ ಮಾಡಿ ನಿರ್ಧರಿಸಲಾಗುವುದು. ನಾವು ಹೇಳಿದಾಗ ಹೋರಾಟ ನಡೆಸಲು ಭಕ್ತರು ಸಜ್ಜಾಗಬೇಕು’ ಎಂದು ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT