ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳೂರು | ಕಾನಾಮಡಗು ಶರಣಬಸವೇಶ್ವರ ಸ್ವಾಮಿಯ ವೈಭವದ ರಥೋತ್ಸವ

Last Updated 3 ಡಿಸೆಂಬರ್ 2022, 7:05 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಗಡಿಗ್ರಾಮ ಅಣಬೂರು ಸಮೀಪದ ಕಾನಾಮಡುಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.

ಶರಣಬಸವೇಶ್ವರರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಸಕಲ ಪೂಜಾವಿಧಿ ವಿಧಾನಗಳೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥ ಸಾಗುತ್ತಿದಂತೆ ಭಕ್ತರು ಜಯಘೋಷ ಹಾಕಿ, ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು.

ಧರ್ಮಾಧಿಕಾರಿ ಐಮಡಿ ಶರಣಾರ್ಯರು, ಚನ್ನಗಿರಿಯ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಮುಸ್ಟೂರಿನ ಓಂಕಾರೇಶ್ವರ ಮಠದ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ರಥದ ಮುಕ್ತಿಪಠವನ್ನು ₹ 1.25 ಲಕ್ಷಕ್ಕೆ ಜುಮ್ಮೊಬ್ಬನಹಳ್ಳಿ ಜಿ. ಒಬಣ್ಣ ಹರಾಜಿನಲ್ಲಿ ಪಡೆದುಕೊಂಡರು.

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕಾರ್ತಿಕ ಮಾಸದಲ್ಲಿ ರಥೋತ್ಸವ ನಡೆಯವುದು ಇಲ್ಲಿನ ವಿಶೇಷವಾಗಿದ್ದು, ರಥೋತ್ಸವಕ್ಕೂ ಮುನ್ನ ಮಠದ ಆವರಣದಲ್ಲಿ ಆಯೋಜಿಸಿದ್ದ ಸರ್ವ ಧರ್ಮ ಸಾಮೂಹಿಕ ಮದುವೆಯಲ್ಲಿ ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು. ರಕ್ತದಾನ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು.

ಬಿಜೆಪಿ ಮುಖಂಡರಾದ ಕೋಡಿಹಳ್ಳಿ ಭೀಮಣ್ಣ, ಭೀಮೇಶ್, ದುರುಗೇಶ್, ಕಾಂಗ್ರೆಸ್ ಮುಖಂಡರಾದ ಗುಜ್ಜಲ್ ರಘು, ಎನ್.ಟಿ.ಶ್ರೀನಿವಾಸ್, ಜಗಳೂರಿನ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕೂಡ್ಲಿಗಿಯ ಡಿವೈಎಸ್ಪಿ ಹರೀಶ್ ರೆಡ್ಡಿ, ಕೊಟ್ಟೂರು ಸಿಪಿಐ ಸೋಮಶೇಖರ ಕೆಂಚಾರೆಡ್ಡಿ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT