ಮಂಗಳವಾರ, ಏಪ್ರಿಲ್ 20, 2021
24 °C

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಕಲಾ ತಂಡಗಳ ಮೆರುಗು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮೆರವಣಿಗೆ

ದಾವಣಗೆರೆ: ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯುತ್ತಿರುವ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿದ್ಯಾನಗರ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಿಂದ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

ಡೊಳ್ಳು ಕುಣಿತ, ವೀರಗಾಸೆ, ಕೀಲುಕುದುರೆ, ಮಕ್ಕಳ ಬ್ಯಾಂಡ್‌ಸೆಟ್‌ಗಳು ಮೆರವಣಿಗೆಗೆ ಮೆರುಗು ನೀಡಿತು.

ಸಮ್ಮೇಳನದ ಸರ್ವಾಧ್ಯಕ್ಷ ಎನ್‌.ಟಿ. ಯರ‍್ರಿಸ್ವಾಮಿ ಸಾರೋಟು ಏರಲು ನಿರಾಕರಿಸಿದ್ದು, ಕನ್ನಡ ಭುವನೇಶ್ವರಿ ದೇವಿಯ ವಿಗ್ರಹದೊಂದಿಗೆ ಮೆರವಣಿಗೆಯಲ್ಲಿ ನಡೆದುಕೊಂಡು ಬಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅವರೂ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು