ದಾವಣಗೆರೆ: ವಿಧಾನಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ನಾಲ್ವರು ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್, ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ಹುಸೇನ್ ಉಕ್ಕಡಗಾತ್ರಿ, ಉಬೇದುಲ್ಲಾ ಅತ್ತರ್, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಕಾರ್ಯಾಧ್ಯಕ್ಷ ಎ. ಅಬ್ದುಲ್ ಜಬ್ಬಾರ್, ಪ್ರಧಾನ ಕಾರ್ಯದರ್ಶಿ ಆಸಿಫ್ ಜುನೈದಿ ಸೇರಿ ಹಲವು ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.

‘ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಳಿಕ ನಡೆಯುತ್ತಿರುವ ಬೆಳವಣಿಗೆಗಳು ಬೇಸರ ಮೂಡಿಸಿವೆ. 40 ವರ್ಷಗಳಿಂದ ಪಕ್ಷಕ್ಕೆ ದುಡಿದ ಕೆ. ಅಬ್ದುಲ್ ಜಬ್ಬಾರ್ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ಆಕ್ಷೇಪಗಳಿವೆ. ಪದಾಧಿಕಾರಿಗಳ ಹುದ್ದೆಗೆ ರಾಜೀನಾಮೆ ನೀಡಿ, ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಲಿದ್ದೇವೆ’ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿರುವ ಕೆ. ಅಬ್ದುಲ್ ಜಬ್ಬಾರ್ ಅವರಿಗೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವಂತೆ ಯಾರೊಬ್ಬರೂ ಆಹ್ವಾನ ನೀಡಲಿಲ್ಲ. ಇದರಿಂದ ಮನನೊಂದು ಅವರು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಏ.3ರಂದು ರಾಜೀನಾಮೆ ಸಲ್ಲಿಸಿದ್ದರು. ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮತದಾನ ಮುಗಿಯುವವರೆಗೂ ಬಹಿರಂಗಪಡಿಸಿರಲಿಲ್ಲ’ ಎಂದು ಮಾಹಿತಿ ನೀಡಿದರು.

‘ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ 5 ವರ್ಷಗಳಿಂದ ಅತ್ಯುತ್ತಮ ಕೆಲಸ ಮಾಡಿದ್ದಾರೆ. 2023ರಲ್ಲಿ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಸಮುದಾಯದ ಮತಗಳು ಹೆಚ್ಚಾಗಿರುವ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೇಳಿರುವುದನ್ನೇ ತಪ್ಪು ಎಂಬಂತೆ ಬಿಂಬಿಸಲಾಗುತ್ತಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರಿಗೆ ಮಸಿಬಳಿಯುವ ಹುನ್ನಾರಗಳು ನಡೆಯುತ್ತಿವೆ’ ಎಂದು ಕಿಡಿಕಾರಿದರು.

‘ಹಲವು ದಿನ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿ ಕೆಲಸ ಮಾಡಿದರೂ ಪ್ರಯೋಜನವಾಗಿಲ್ಲ ಎಂಬ ಹತಾಶೆ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ಹಾಗೂ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಕಾಡುತ್ತಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಅಬ್ದುಲ್ ಗನಿ ತಾಹೀರ್ ದೂರಿದರು.

‘ಉಪಚುನಾವಣೆಯಲ್ಲಿ ಕಾರ್ಯಕರ್ತರು, ನಾಯಕರನ್ನು ವಿಶ್ವಾಸಕ್ಕೆ ಪಡೆಯಲು ಪಕ್ಷಕ್ಕೆ ಸಾಧ್ಯವಾಗಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಸಾಕಾರಗೊಳ್ಳುವುದು ಅನುಮಾನ ಮೂಡಿಸಿದೆ. ಉಪಚುನಾವಣೆಯ ಸಂದರ್ಭದಲ್ಲಿ ಆಗಿರುವ ಈ ಸಮಸ್ಯೆ ಸಾರ್ವತ್ರಿಕ ಚುನಾವಣೆಯ ಮೇಲೆಯೂ ಪರಿಣಾಮವುಂಟು ಮಾಡಲಿದೆ’ ಎಂದರು.

‘ಸಚಿವ–ಜಬ್ಬಾರ್: 2013ರಿಂದ ವೈಮನಸ್ಸು’

‘ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ನಡುವೆ 2013ರಿಂದ ವೈಮನಸ್ಸಿದೆ. ಯಾವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಕಂದಕ ನಿರ್ಮಾಣವಾಗಿದೆ ಎಂಬುದು ಗೊತ್ತಿಲ್ಲ. ಆದರೆ, ಶಾಮನೂರು ಶಿವಶಂಕರಪ್ಪ ಬದುಕಿರುವವರೆಗೆ ಇದು ಇಷ್ಟೊಂದು ದೊಡ್ಡದಾಗಿರಲಿಲ್ಲ’ ಎಂದು ಮೊಹಮ್ಮದ್ ಸಿರಾಜ್ ತಿಳಿಸಿದರು.

‘2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಸಭೆಗೆ ಶಾಮನೂರು ಕುಟುಂಬದ ಯಾರೊಬ್ಬರೂ ಬರಲಿಲ್ಲ. ಪಕ್ಷನಿಷ್ಠೆ ಕೈಬಿಡದೇ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದೆವು. ಸಚಿವರು ಹಾಗೂ ಜಬ್ಬಾರ್ ನಡುವಿನ ವೈಮನಸ್ಸಿನ ಲಾಭ ಪಡೆಯಲು ಅನೇಕರು ಪ್ರಯತ್ನಿಸಿದ್ದಾರೆ. ಜಬ್ಬಾರ್ ಅವರು ದೇಗುಲದ ಘಂಟೆಯಂತಾಗಿದ್ದು, ಸಿಕ್ಕವರೆಲ್ಲ ಅವರನ್ನು ಬಾರಿಸುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.