ದಾವಣಗೆರೆ: ರಾಜ್ಯ ಸರ್ಕಾರ ಒಂದು ವರ್ಷಗಳ ಕಾಲ ಪೂರೈಸಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಪಕ್ಷದ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

‘ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು, ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಿಂದಾಗಿ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದೆ’ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದರು.

‘ಸವಾಲುಗಳ ನಡುವೆಯೂ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡಲಾಗುವುದು ಎಂದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಕಾರ್ಯದರ್ಶಿ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಆರ್.ಎಚ್.ನಾಗಭೂಷಣ್ ಮಾತನಾಡಿದರು. ಮಹಿಳಾ ಕಾಂಗ್ರೆಸ್‍ನ ರಾಜೇಶ್ವರಿ, ಯುವ ಕಾಂಗ್ರೆಸ್‍ನ ಸಾಗರ್ ಎಲ್.ಎಚ್., ರಾಘವೇಂದ್ರ ಗೌಡ, ಸುಭಾನ್ ಸಾಬ್, ರಾಕೇಶ್, ಗೋಪಿ(ಅಂತು)ಸುರೇಶ್, ಹನುಮಂತರಾಜ್ (ಪಾಪಣ್ಣಿ), ರಾಘವೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.