ನ್ಯಾಮತಿ: ‘ಬಡವರು, ಯುವಜನ ಹಾಗೂ ಮಹಿಳೆಯರಿಗಾಗಿ ರಾಜ್ಯದಲ್ಲಿ ಜಾರಿ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಇತರೆ ರಾಜ್ಯಗಳಿಗೆ ಮಾದರಿಯಾಗಿವೆ. ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿಗಳೂ ಇವುಗಳನ್ನು ನಕಲು ಮಾಡಿದ್ದಾರೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ₹38.50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣವನ್ನು ದೇವಸ್ಥಾನ ನಿರ್ಮಾಣ ಕಾಮಗಾರಿಗೆ ನೀಡುವ ಮೂಲಕ ಮಲ್ಲಿಗೇನಹಳ್ಳಿ ಗೃಹಿಣಿಯರು ಆದರ್ಶವಾಗಿದ್ದಾರೆ ಎಂದರು.

‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ 23 ಲಕ್ಷ ಹಾಗೂ ರಾಜ್ಯದ 1.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಅಧಿಕಾರವಧಿಯಲ್ಲಿ ಇಂತಹ 70 ಪರೀಕ್ಷಾ ಹಗರಣಗಳು ಜರುಗಿವೆ ಎಂದು ಆರೋಪಿಸಿದರು.

‘ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಕಾದಿದ್ದು, ನಂತರ ಜೀವನಾವಶ್ಯಕ ವಸ್ತುಗಳ ಬೆಲೆಗಳನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಮತದಾರರು ಇದನ್ನು ಗಮನಿಸಬೇಕು. ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನ್ಯಾಮತಿ ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ₹ 38 ಕೋಟಿ ಅನುದಾನ ಬಿಡುಗಡೆ ಮಾಡಿದೆ’ ಎಂದು ತಿಳಿಸಿದರು.

‘ನೂತನ ತಾಲ್ಲೂಕು ರಚನೆಯಾದ ನಂತರ ತಾಲ್ಲೂಕು ಕಚೇರಿ ಕಟ್ಟಡಕ್ಕೆ ಅನುದಾನ ಬಿಡುಗಡೆಯಾಗಿರಲಿಲ್ಲ. ನಾನು ಮುಖ್ಯಮಂತ್ರಿಗೆ ಸತತ ಮನವಿ ಮಾಡಿದ ಮೇರೆಗೆ ಪ್ರಜಾಸೌಧ ಕಟ್ಟಡಕ್ಕೆ ₹ 8.60 ಕೋಟಿಯನ್ನು ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಒಂದು ವರ್ಷದಲ್ಲಿ ಕಟ್ಟಡ ಪೂರ್ಣಗೊಂಡು ನೂತನ ಕಟ್ಟಡದಲ್ಲಿ ಆಡಳಿತ ನಡೆಯಲಿದೆ’ ಎಂದು ಹೇಳಿದರು.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಮನಾಯ್ಕ ಮಾತನಾಡಿದರು. ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಪಂ ಸಿಇಒ ಗಿತ್ತೆ ಮಾಧವ್ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಒ ಎಚ್.ವಿ. ರಾಘವೇಂದ್ರ, ಕಾಂಗ್ರೆಸ್ ಮುಖಂಡರಾದ ಎಲ್.ಈಶ್ವರನಾಯ್ಕ, ಎಚ್.ಎ.ಉಮಾಪತಿ, ನುಚ್ಚಿನ ವಾಗೀಶ, ವನಜಾಕ್ಷ್ಮಮ್ಮ, ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-1191911991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.