ಬುಧವಾರ ಪಟ್ಟಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಘಟಕದ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ಹಾಗೂ ಸಂಘದ ಪರಿವಾರದವರು ಚರ್ಚಿಸಿ ನೇಮಕ ಮಾಡಿದ್ದಾರೆ. ಈಗ ಕೆಲ ಹಿರಿಯ ನಾಯಕರು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ’ ಎಂದು ಪರೋಕ್ಷವಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ಟಾಂಗ್ ಕೊಟ್ಟರು.