ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕಾ ವಿತರಕರಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Last Updated 2 ನವೆಂಬರ್ 2022, 6:42 IST
ಅಕ್ಷರ ಗಾತ್ರ

ದಾವಣಗೆರೆ: ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಮಂಗಳವಾರ ಮುಂಜಾನೆ ದಾವಣಗೆರೆ ಪ್ರವಾಸಿ ಮಂದಿರ ರಸ್ತೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.ಡಿ. ರಾಘವನ್‌ ಮಾತನಾಡಿ, ‘ಬಾಂಬೆ ಪ್ರಾಂತ್ಯ, ಹೈದರಾಬಾದ್‌ ಪ್ರಾಂತ್ಯ, ಮದ್ರಾಸ್ ಪ್ರಾಂತ್ಯ, ಮೈಸೂರು ಎಂದು ಕನ್ನಡ ನಾಡು ಹಂಚಿಹೋಗಿತ್ತು. ಹುಯಿಲಗೋಳ ನಾರಾಯಣ ರಾಯರು, ಆಲೂರು ವೆಂಕಟ ರಾಯರು ಸೇರಿದಂತೆ ಅನೇಕರು ಹೋರಾಟ ಮಾಡಿ 1956ರಲ್ಲಿ ಏಕೀಕರಣ ಮಾಡಿದರು’ ಎಂದು ವಿವರಿಸಿದರು.

ಎಲ್ಲರಲ್ಲಿಯೂ ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅಭಿಮಾನ ಇರಬೇಕು ಎಂದು ಸಲಹೆ ನೀಡಿದರು.

‘ಪ್ರಜಾವಾಣಿ’ ಬ್ಯೂರೊ ಮುಖ್ಯಸ್ಥ ಸಿದ್ದಯ್ಯ ಹಿರೇಮಠ್‌, ಪ್ರಸರಣ ವಿಭಾಗದ ವ್ಯವಸ್ಥಾಪಕ ಪ್ರಕಾಶ್‌ ನಾಯಕ್‌, ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ಪ್ರಮೋದ್‌ ಭಾಗವತ್‌, ಮುದ್ರಣ ವಿಭಾಗದ ವ್ಯವಸ್ಥಾಪಕ ಟಿ. ಮುರಳೀಧರ, ಪ್ರಸರಣ ವಿಭಾಗದ ಪ್ರತಿನಿಧಿಗಳಾದ ಭರತ್‌ ಬಿಡ್ಡಪ್ಪ, ಸತೀಶ್‌, ಅಕೌಂಟೆಂಟ್‌ ವಿಭಾಗದ ಪಾಂಡುರಂಗ ಶೆಟ್ಟಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ್‌, ಅರುಣ್‌ ಕುಮಾರ್‌, ರಮೇಶ್‌ ಜೆ. ವತನ್‌, ನಿಂಗಪ್ಪ, ಆನಂದ, ಪ್ರದೀಪ್‌, ಪ್ರಕಾಶ್‌, ಬಸವರಾಜ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT