ದಾವಣಗೆರೆಯಲ್ಲಿ ಸಂಭ್ರಮ ಕರ್ನಾಟಕ ರಾಜ್ಯೋತ್ಸವ

ದಾವಣಗೆರೆ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಜ್ರಮ ನಡೆಯಿತು.
ಹೈಸ್ಕೂಲ್ ಮೈದಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಿತು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಧ್ವಜಾರೋಹಣ ಮಾಡಿದರು.
ಆಕರ್ಷಕ ಪಥಸಂಚಲನ ನಡೆಯಿತು. 14 ಶಿಕ್ಷಕರನ್ನು ಗೌರವಿಸಲಾಯಿತು. 51 ಮಂದಿ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್ ಅವರೂ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.