ದಾವಣಗೆರೆ: ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ (ಆರ್ಒ) ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಘಟಕಗಳ ನಿರ್ವಹಣೆಯಲ್ಲಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು. ಸೇವಾ ಮನೋಭಾವ ಇರುವ ಸಂಸ್ಥೆಗಳಿಗೆ ನಿರ್ವಹಣೆಯ ಹೊಣೆಗಾರಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಾಕೀತು ಮಾಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸರ್ಕಾರ ಹೆಚ್ಚು ಹಣ ವೆಚ್ಚ ಮಾಡಿದೆ. ದುಬಾರಿ ಯಂತ್ರಗಳನ್ನು ಖರೀದಿಸಿ ಅಳವಡಿಸಿದೆ. ಇವು ಹಾಳಾದರೆ ಸರ್ಕಾರದ ಆಶಯ ಈಡೇರುವುದಿಲ್ಲ. ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಉತ್ತಮವಾಗಿ ನಿರ್ವಹಣೆ ಮಾಡುತ್ತಿದೆ. ಇಂತಹ ಸಂಸ್ಥೆಗಳನ್ನು ಗುರುತಿಸಿ’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ 791 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. 450 ಘಟಕಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಘಟಕಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಗ್ರಾಮ ಪಂಚಾಯಿತಿಗಳು ಆಸಕ್ತಿ ತೋರುತ್ತಿಲ್ಲ. ಈ ಸಮಸ್ಯೆ ಜಗಳೂರು ತಾಲ್ಲೂಕಿನಲ್ಲಿ ಹೆಚ್ಚಾಗಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.

‘ಆರ್ಒ ಘಟಕಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸುವಂತೆ ಸರ್ಕಾರದ ನಿರ್ದೇಶನವಿದೆ. ಏಜೆನ್ಸಿಗಳ ನಿರ್ವಹಣೆಯ ಅವಧಿ ಮುಗಿದ ಬಳಿಕ ಈ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕೆ ಪ್ರತಿ ಗ್ರಾಮ ಪಂಚಾಯಿತಿ ವಾರ್ಷಿಕ ₹ 36,000 ವೆಚ್ಚ ಮಾಡಲು ಅವಕಾಶವಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ವಿವರಿಸಿದರು.

‘ಶುದ್ಧ ಕುಡಿಯುವ ನೀರಿನ ಘಟಕದ ಯಂತ್ರಗಳಲ್ಲಿ ಮೆಮ್ರೇನ್ ಅತಿಮುಖ್ಯ. ಗುಣಮಟ್ಟದ ಮೆಮ್ರೇನ್ಗೆ ₹ 23,000ದವರೆಗೆ ದರವಿದೆ. ಇದು ಒಂದೂವರೆ ವರ್ಷದ ವರೆಗೂ ಕಾರ್ಯನಿರ್ವಹಿಸುತ್ತದೆ. ಇವುಗಳನ್ನು ಬದಲಾವಣೆ ಮಾಡುವಾಗ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಬೇಕು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತರೆ ಕೆಲಸ ಆಗುವುದಿಲ್ಲ’ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಎಂಜಿನಿಯರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಆರ್ಒ ಘಟಕಗಳನ್ನು ಗ್ರಾಮ ಪಂಚಾಯಿತಿ ಬದಲು ಏಜೆನ್ಸಿಗಳಿಗೆ ವಹಿಸಿದರೆ ಅನುಕೂಲ. ಚನ್ನಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಒ ಘಟಕಗಳ ನಿರ್ವಹಣೆಗೆ ಏಜೆನ್ಸಿ ನಿಗದಿಪಡಿಸಲಾಗಿದ್ದು, ಯಾವುದೇ ದೂರು ಬರುತ್ತಿಲ್ಲ. ಉಳಿದ ತಾಲ್ಲೂಕುಗಳಲ್ಲಿ ಇಂತಹ ವ್ಯವಸ್ಥೆಯಾದರೆ ಒಳಿತು’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಸಲಹೆ ನೀಡಿದರು.

ಆಸ್ಪತ್ರೆ ಮೇಲ್ದರ್ಜೆ: ಪ್ರಸ್ತಾವಕ್ಕೆ ಸೂಚನೆ

ಆಸ್ಪತ್ರೆಗಳ ಸುಧಾರಣೆಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮರುನಿರ್ಮಾಣಕ್ಕೆ ₹ 235 ಕೋಟಿಗೆ ಅನುಮೋದನೆ ಸಿಕ್ಕಿದ್ದು, ₹ 192 ಕೋಟಿ ಬಿಡುಗಡೆಯಾಗಿದೆ. ತಾಲ್ಲೂಕು ಕೇಂದ್ರಗಳಲ್ಲಿ ಕನಿಷ್ಠ 250 ಹಾಸಿಗೆಯ ಆಸ್ಪತ್ರೆ ಸಜ್ಜಾಗಬೇಕಿದೆ. ಕೂಡಲೇ ಪ್ರಸ್ತಾವಗಳನ್ನು ಸಿದ್ಧಪಡಿಸಿ’ ಎಂದು ಸಚಿವ ಮಲ್ಲಿಕಾರ್ಜುನ್ ಸೂಚನೆ ನೀಡಿದರು.

‘ವೈದ್ಯಕೀಯ ಉಪಕರಣ ಅಗತ್ಯವಿದ್ದ ಕಡೆಗೆ ಸ್ಥಳಾಂತರಿಸಬೇಕು. ಆರೋಗ್ಯ ಇಲಾಖೆಯಲ್ಲಿ ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗಿದೆ. ಅವರ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದರು.

ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಬಸವರಾಜ್ ಹಾಜರಿದ್ದರು.

ಸಚಿವ–ಶಾಸಕರ ವಾಗ್ಬಾಣಕ್ಕೆ ನಗೆಹೊನಲು

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಹರಿಹರ ಶಾಸಕ ಬಿ.ಪಿ. ಹರೀಶ್ ನಡುವಿನ ರಾಜಕೀಯ ಮುನಿಸಿಗೆ ಸಭೆ ಸಾಕ್ಷಿಯಾಯಿತು. ಇಬ್ಬರು ಪರಸ್ಪರ ವಾಗ್ಬಾಣಗಳನ್ನು ಬಿಡುತ್ತಲೇ ಇದ್ದರು. ಇವುಗಳಲ್ಲಿ ಕೆಲವು ಸಭೆಯನ್ನು ನಗೆಗಡಲಲ್ಲಿ ತೇಲಿಸಿದವು.

ಪ್ರತಿ ಇಲಾಖೆಯ ಪ್ರಗತಿ ಪರಿಶೀಲನೆಯ ಸಂದರ್ಭದಲ್ಲಿ ಶಾಸಕ ಬಿ.ಪಿ. ಹರೀಶ್ ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದರು. ಆಗ ಮಧ್ಯಪ್ರವೇಶಿಸುತ್ತಿದ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ‘ನೀವು ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಬೇಕು’ ಎಂದು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದರು. ಆಗ ಇಬ್ಬರ ನಡುವೆ ವಾಗ್ವಾದವೂ ನಡೆಯಿತಿತ್ತು.

‘ಜಿಲ್ಲೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ವ್ಯವಸ್ಥೆ ಇದೆಯೇ’ ಎಂಬ ಹರೀಶ್ ಪ್ರಶ್ನೆಗೆ ಕಸಿವಿಸಿಗೊಂಡ ಸಚಿವರು, ‘ಜಿಲ್ಲಾ ಆಸ್ಪತ್ರೆಯ ಕುರಿತು ಚರ್ಚೆ ಕೈಗೆತ್ತಿಕೊಂಡಾಗ ಪ್ರಸ್ತಾಪಿಸಿ’ ಎಂದರು. ‘ಡಯಾಲಿಸಿಸ್ ಸೇವೆ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ಲಭ್ಯವಾಗುತ್ತಿಲ್ಲ’ ಎಂಬ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.

‘ಕೋವಿಡ್ ಸಂದರ್ಭದಲ್ಲಿ ಸ್ಥಾಪಿಸಿದ ಆಕ್ಸಿಜನ್ ಪ್ಲಾಂಟ್ಗಳು ಕಾರ್ಯನಿರ್ವಹಿಸುತ್ತಿವೆಯೇ? ಅಪ್ಪ–ಮಕ್ಕಳು ಫೋಟೊಗೆ ಪೋಸುಕೊಟ್ಟ ಬಳಿಕ ಅವುಗಳ ಸ್ಥಿತಿ ಏನಾಗಿದೆ?’ ಎಂದು ಜಿ.ಎಂ. ಸಿದ್ದೇಶ್ವರ ಹೆಸರು ಪ್ರಸ್ತಾಪಿಸದೇ ಸಚಿವರು ಕುಟುಕಿದರು. ‘ಆಗಾಗ ಶಾಸಕರನ್ನು ಭೇಟಿ ಮಾಡಿ’ ಎಂಬುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಅವರಿಗೂ ಸಲಹೆ ನೀಡಿದರು. ‘ಈವರೆಗೆ ಏನಾದರೂ ಕೊಟ್ಟಿದ್ದೀರಾ’ ಎಂದು ಹರೀಶ್ ಅವರು ಅಧಿಕಾರಿಯನ್ನು ಪ್ರಶ್ನಿಸಿದಾಗ ಸಭೆಯಲ್ಲಿ ನಗೆಬುಗ್ಗೆ ಎದ್ದಿತು.

ಬೀದಿನಾಯಿ ನಿಯಂತ್ರಿಸಿ: ಸಂಸದೆ

‘ಜಿಲ್ಲೆಯಲ್ಲಿ ಬೀದಿನಾಯಿ ಹಾವಳಿ ವಿಪರೀತವಾಗಿದೆ. ಬೀದಿನಾಯಿ ದಾಳಿಯಿಂದ ಚಿಕ್ಕ ಮಗುವೊಂದು ಬಲಿಯಾಗಿದೆ. ಸಾರ್ವಜನಿಕರು ಆತಂಕದಲ್ಲಿ ಬದುಕಬೇಕಾಗಿದೆ. ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹಂದಿ, ಬೀದಿನಾಯಿಗಳ ಹಾವಳಿ ರೋಗಿಗಳು ಬೇಸತ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚಿಸಿದರು.

‘ಸುಪ್ರೀಂ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಬೀದಿನಾಯಿಗಳ ಆಹಾರಕ್ಕೆ ಸ್ಥಳ ನಿಗದಿಪಡಿಸಲಾಗಿದೆ. ಬೀದಿನಾಯಿಗಳ ಪುನರ್ವಸತಿಗೆ ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಅಗತ್ಯ ಅನುದಾನವೂ ಲಭ್ಯವಿದೆ. ಶೀಘ್ರದಲ್ಲೇ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾಹಿತಿ ನೀಡಿದರು.

ಸಾಸ್ವೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಯಾಗಿ ಆರು ತಿಂಗಳು ಕಳೆದಿದೆ. ಆದರೆ, ಈವರೆಗೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸಿಲ್ಲ. ಇದರಿಂದ ಜನರು ಬೇಸರಗೊಂಡಿದ್ದಾರೆ
ಡಿ.ಜಿ. ಶಾಂತನಗೌಡ, ಶಾಸಕ, ಹೊನ್ನಾಳಿ

ಮೆಕ್ಕೆಜೋಳವನ್ನು ದಲಾಲರು ಖರೀದಿ ಮಾಡಿಟ್ಟುಕೊಂಡಿದ್ದಾರೆ. ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು ನುಸುಳದಂತೆ ಎಚ್ಚರವಹಿಸಬೇಕು. ರೈತರಿಂದ ನೇರವಾಗಿ ಖರೀದಿ ಮಾಡಬೇಕು.
ಕೆ.ಎಸ್. ಬಸವಂತಪ್ಪ, ಶಾಸಕ, ಮಾಯಕೊಂಡ

ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ನೆರವು ಪಡೆಯುವಾಗ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು. ಉಪಕರಣ, ಯಂತ್ರಗಳ ಗುಣಮಟ್ಟ ಪರೀಕ್ಷಿಸಿ ಖಚಿತಪಡಿಸಿಕೊಳ್ಳಬೇಕು.
– ಡಾ.ಪ್ರಭಾ ಮಲ್ಲಿಕಾರ್ಜುನ್, ಸಂಸದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.