ಎಲ್ಲ ವರ್ಗಗಳಿಗೆ ಅವಕಾಶ ಕಲ್ಪಿಸಿದ ಕೆಂಪೇಗೌಡ

7

ಎಲ್ಲ ವರ್ಗಗಳಿಗೆ ಅವಕಾಶ ಕಲ್ಪಿಸಿದ ಕೆಂಪೇಗೌಡ

Published:
Updated:
ಚನ್ನರಾಯಪಟ್ಟಣದಲ್ಲಿ ಬುಧವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಶಾಸಕ ಸಿ.ಎನ್‌. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಸನ್ಮಾನಿಸಿದರು

ಚನ್ನರಾಯಪಟ್ಟಣ: ಬೆಂಗಳೂರು ನಗರವನ್ನು ನಿರ್ಮಿಸುವ ಮೂಲಕ ಎಲ್ಲ ವರ್ಗಗಳ ಜನರಿಗೆ ಬದುಕು ನಡೆಸಲು ಅವಕಾಶ ಕಲ್ಪಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಸಿ.ಎನ್‌. ಬಾಲಕೃಷ್ಣ ಹೇಳಿದರು.

ಪಟ್ಟಣದಲ್ಲಿ ಬುಧವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬೆಂಗಳೂರು ಅಭಿವೃದ್ಧಿ ಹೊಂದಲು ಆಡಳಿತ ಚತುರ ಎನ್ನಿಸಿಕೊಂಡಿದ್ದ ಕೆಂಪೇಗೌಡರ ದೂರದೃಷ್ಟಿ ಕಾರಣ. ಅಂತರರಾಷ್ಟ್ರೀಯಮಟ್ಟದಲ್ಲಿ ಬೆಂಗಳೂರು ಪ್ರವರ್ಧಮಾನಕ್ಕೆ ಬರಲೂ ಅವರ ಕೊಡುಗೆ ಅಪಾರ ಎಂದರು.

ತಾಲ್ಲೂಕು ಕ್ರೀಡಾಂಗಣಕ್ಕೆ ಕೆಂಪೇಗೌಡರ ಹೆಸರಿಡುವ ಕುರಿತು ಪುರಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದ ಅವರು, ಪರಿಸರ ಸಮತೋಲನ ಕಾಪಾಡಬೇಕೆಂದರೆ ಹೆಚ್ಚಾಗಿ ಗಿಡ, ಮರಗಳನ್ನು ಪೋಷಿಸಬೇಕು. ತಾಲ್ಲೂಕಿನ ಶಾಲಾ–ಕಾಲೇಜು, ಸರ್ಕಾರಿ ಜಾಗದಲ್ಲಿಗಿಡ ನೆಡುವುದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಚನ್ನರಾಯಪಟ್ಟಣ ತಾಲ್ಲೂಕನ್ನು  ಮಾದರಿಯಾಗಿ ರೂಪಿಸಲಾಗುವುದು ಎಂದು ತಿಳಿಸಿದರು.

ವಿಧಾನಪರಿಷತ್ತು ಸದಸ್ಯ ಎಂ.ಎ. ಗೋಪಾಲಸ್ವಾಮಿ ಮಾತನಾಡಿ, ಹಿಂದಿನ ಕಾಂಗ್ರೆಸ್‌ ಸರ್ಕಾರ ಕೆಂಪೇಗೌಡ ಜಯಂತ್ಯುತ್ಸವ ಆಚರಣೆ ಹಾಗೂ ಕೆಂಪೇಗೌಡ ಪ್ರಾಧಿಕಾರವನ್ನು ರಚಿಸಿತು ಎಂದರು.

ಉಪವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜು ಮಾತನಾಡಿದರು.
ವಿವಿಧ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಚನ್ನಪ್ಪಶೆಟ್ಟಿ, ಸಿ.ಪಿ. ಕುಮಾರ್‌, ಎ.ಎಂ. ಜಯರಾಂ, ನಾಗಮ್ಮ, ಯೋಗಾನಂದ, ಶಿವಣ್ಣ, ನಾಗಣ್ಣ ಅವರನ್ನು ಸನ್ಮಾನಿಸಲಾಯಿತು.

ತಹಶೀಲ್ದಾರ್ ಸೋಮಶೇಖರ್‌, ಪುರಸಭಾಧ್ಯಕ್ಷ ಸಿ.ಕೆ.ಗೋಪಾಲಕೃಷ್ಣ, ಉಪಾಧ್ಯಕ್ಷ ಕಲ್ಪನಾ ಸುರೇಶ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾಶಂಕರ್‌, ಶ್ವೇತಾಆನಂದ್, ಎಪಿಎಂಸಿ ಅಧ್ಯಕ್ಷ ಬಿ.ಎಚ್‌. ಶಿವಣ್ಣ, ನಿರ್ದೇಶಕ ಎಂ.ಶಂಕರ್‌,  ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಪಟೇಲ್‌ಮಂಜುನಾಥ್‌, ಕನ್ನಡಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಎಚ್‌.ಎನ್‌. ಲೋಕೇಶ್‌, ಪರಿಸರವಾದಿ ಸಿ.ಎನ್‌. ಅಶೋಕ್‌, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಜಯಪಾಲ್‌, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಚ್‌.ಎಂ. ನಾಗಪ್ಪ, ನಾಡುಪ್ರಭುಕೇಂಪೇಗೌಡ ವೇದಿಕೆಯ ಸಂಸ್ಥಾಪಕ ಆನಂದ್‌, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಭೈರೇಗೌಡ, ಕಾರ್ಯನಿರ್ವಹಣಾಧಿಕಾರಿ ನಂದಿನಿ, ಹೇಮಾವತಿ ಸಹಕಾರ ಸಕ್ಕರೆಕಾರ್ಖಾನೆಯ ಅಧ್ಯಕ್ಷ ಸಿ.ಎನ್‌. ವೆಂಕಟೇಶ್‌, ಎಚ್‌.ಎಂ. ಗೌಡಯ್ಯ ಇತರರು ಇದ್ದರು.

ಇದಕ್ಕೂ ಮುನ್ನಾ ಪಟ್ಟಣದಲ್ಲಿ ಜನಪದ ಕಲಾತಂಡದೊಂದಿಗೆ ಕೆಂಪೇಗೌಡರ ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !