ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುದೀಪ್‌ ಗೈರು: ಅಭಿಮಾನಿಗಳ ಆಕ್ರೋಶ

ವಾಲ್ಮೀಕಿ ಜಾತ್ರೆ: ಮೂವರು ಪೊಲೀಸರಿಗೆ ಗಾಯ
Last Updated 9 ಫೆಬ್ರುವರಿ 2023, 21:17 IST
ಅಕ್ಷರ ಗಾತ್ರ

ಹರಿಹರ (ದಾವಣಗೆರೆ ಜಿಲ್ಲೆ): ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭಕ್ಕೆ ನಟ ಕಿಚ್ಚ ಸುದೀಪ್‌ ಗೈರಾಗಿದ್ದರಿಂದ ಬೇಸರಗೊಂಡ ಅಭಿಮಾನಿಗಳು ವೇದಿಕೆ ಮುಂಭಾಗದ ಕುರ್ಚಿಗಳನ್ನು ಮುರಿದು ಆಕ್ರೋಶವ್ಯಕ್ತಪಡಿಸಿದರು.

ವೇದಿಕೆ ಬಳಿ ಅಳವಡಿಸಿದ್ದಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಪೈಕಿ ಮೂವರು ಗಾಯಗೊಂಡರು.

ಕಾರ್ಯಕ್ರಮಕ್ಕೆ ಸುದೀಪ್‌ ಅವರನ್ನು ಆಹ್ವಾನಿಸಿದ್ದರಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಮಹರ್ಷಿ ವಾಲ್ಮೀಕಿ ಪೀಠದ ಸಭಾಂಗಣದೆದುರು ನೆರೆದಿದ್ದರು. ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆದ ವೇದಿಕೆ ಕಾರ್ಯಕ್ರಮದಲ್ಲೂ ಅಭಿಮಾನಿಗಳು ಸುದೀಪ್‌ ಪರ ಜೈಕಾರ ಕೂಗಿ ಕೇಕೆ ಹಾಕಿದ್ದರು. ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗಾಗ ಎಚ್ಚರಿಕೆ ನೀಡಿ ಅಭಿಮಾನಿಗಳನ್ನು ಸುಮ್ಮನಾಗಿಸುತ್ತಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಪೂರ್ಣಗೊಳಿಸಿ ತೆರಳಿದ ನಂತರವೂ ಸುದೀಪ್‌ ಬಾರದ್ದರಿಂದ ತಾಳ್ಮೆ ಕಳೆದುಕೊಂಡ ಅಭಿಮಾನಿಗಳು ಬ್ಯಾರಿಕೇಡ್‌ಗಳು ನೆಲಕ್ಕುರುಳಿಸಿ ವೇದಿಕೆಯತ್ತ ನುಗ್ಗತೊಡಗಿದರು.
ಪ್ಲಾಸ್ಟಿಕ್‌ ಕುರ್ಚಿಗಳನ್ನು ಪುಡಿಗಟ್ಟಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಬ್ಯಾರಿಕೇಡ್‌ಗಳನ್ನು ಎಸೆದಿದ್ದರಿಂದ ಗಾಯಗೊಂಡ ಮೂವರು ಪೊಲೀಸರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೆಂಗಳೂರಿನಲ್ಲಿ ಆಯೋಜಿಸಿರುವ ಏರ್‌ಶೋ ಕಾರಣ ಹೆಲಿಕಾಪ್ಟರ್‌ ಹಾರಾಟಕ್ಕೆ ಅವಕಾಶ ದೊರೆಯದೇ ಸುದೀಪ್‌ ಜಾತ್ರಾ ಸಮಾರಂಭಕ್ಕೆಬರಲು ಸಾಧ್ಯವಾಗಿಲ್ಲ ಎಂದು ಆಯೋಜಕರು ಘೋಷಿಸಿದ್ದರಿಂದ ಅಭಿಮಾನಿಗಳು ನಿರಾಸೆಯಿಂದ ವಾಪಸ್ಸಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT