ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೋಗುಂಡೆ ಬಕ್ಕೇಶಪ್ಪ

Published 8 ಫೆಬ್ರುವರಿ 2024, 6:30 IST
Last Updated 8 ಫೆಬ್ರುವರಿ 2024, 6:30 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿ ದಾವಣಗೆರೆ ‘ಸಿ’ ವರ್ಗದಿಂದ ಆಯ್ಕೆಯಾಗಿದ್ದ ಕೋಗುಂಡಿ ಬಕ್ಕೇಶಪ್ಪ ಹಾಗೂ ಉಪಾಧ್ಯಕ್ಷರಾಗಿ ಹರಿಹರ ‘ಎ’ವರ್ಗ ಡಿ.ಕುಮಾರ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಜ್ಮಾ ಅವರು ಅಭ್ಯರ್ಥಿಯನ್ನು ಘೋಷಿಸಿದರು. 15 ನಿರ್ದೇಶಕರ ಪೈಕಿ 2 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. 13 ಸ್ಥಾನಗಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ 10 ಜನರು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಹಾಗೂ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಹೆಚ್ಚು ಸ್ಥಾನ ಗಳಿಸಿರುವ ಕಾಂಗ್ರೆಸ್‌ ಡಿಸಿಸಿ ಬ್ಯಾಂಕ್‌ನಲ್ಲಿ ಅಧಿಕಾರದ ಗದ್ದುಗೆ ಏರಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇತ್ತು.

‘ರೈತರಿಗೆ ಮಧ್ಯವರ್ತಿಗಳ ಕಾಟ ತಪ್ಪಿಸಿ ನೇರವಾಗಿ ಸಾಲ ಸಿಗುವಂತೆ ಮಾಡುವುದು. ಬ್ಯಾಂಕ್‌ ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು. ಬ್ಯಾಂಕ್‌ನಲ್ಲಿ ಬಿಗಿಯಾದ ಆಡಳಿತ ನಡೆಸಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರ ಗುರಿಯಾಗಿದ್ದು, ಅದನ್ನು ಈಡೇರಿಸಲು ಪ್ರಯತ್ನ ನಡೆಸಲಾಗುವುದು’ ಎಂದು ಕೋಗುಂಡೆ ಬಕ್ಕೇಶಪ್ಪ ತಿಳಿಸಿದರು.

‘ಕೋಗುಂಡೆ ಬಕ್ಕೇಶಪ್ಪ ಅವರು 35 ವರ್ಷಗಳಿಂದ ದಾವಣಗೆರೆ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್‌ನ ನಿರ್ದೇಶಕರಾಗಿದ್ದರು. 10 ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅಂತಿಮಗೊಳಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT