ಶನಿವಾರ, ಜನವರಿ 16, 2021
27 °C

ಕೊಕ್ಕನೂರು: ಸಂಭ್ರಮದ ಕಾರ್ತಿಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಲೇಬೆನ್ನೂರು: ಸಮೀಪದ ಕೊಕ್ಕನೂರಿನ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ಹಾಗೂ ಅಶ್ವೋತ್ಸವ ಶನಿವಾರ ವೈಭವದಿಂದ ಜರುಗಿತು.

ಗ್ರಾಮದ ಮುಖ್ಯಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿ ಗ್ರಾಮದರ್ಶನ ಮೆರವಣಿಗೆ ಜರುಗಿತು. ದೇವಾಲಯದ ಆವರಣದಲ್ಲಿ ಎಣ್ಣೆ ದೀಪ ಬೆಳಗಿಸಿದ ಭಕ್ತರು ಭಕ್ತಿ ಸಮರ್ಪಿಸಿದರು. ದೇವಾಲಯ ಹಾಗೂ ರಾಜಬೀದಿಯನ್ನು ವಿದ್ಯುತ್ ದೀಪಗಳಿಂದ, ಮೂಲ ಆಂಜನೇಯ ವಿಗ್ರಹಕ್ಕೆ ಹೂವುಗಳಿಂದ ಅಲಂಕರಿಸಲಾಗಿತ್ತು. ಜಾತ್ರೆಯಲ್ಲಿ ಆಟಿಕೆ ಸಾಮಾನು, ಬೆಂಡು ಬತ್ತಾಸು, ಬಳೆ, ಐಸ್ ಕ್ರೀಂ, ಅಂಗಡಿಗಳು ಗಮನ ಸೆಳೆದವು.

ಚುಮು ಚುಮು ಚಳಿ ನಡುವೆ ಭಕ್ತರು ದೇವರ ದರ್ಶನ ಪಡೆದರು. ಗ್ರಾಮದೆಲ್ಲೆಡೆ ಹಬ್ಬದ ವಾತಾವರಣ ಮೂಡಿತ್ತು.  ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಕಾರು, ಆಟೊ, ಟ್ರ್ಯಾಕ್ಟರ್ ಹಾಗೂ ಇತರೆ ವಾಹನಗಳ ಭರಾಟೆ, ತೆಂಗಿನಕಾಯಿ, ಹೂ ಹಣ್ಣಿನ ವ್ಯಾಪಾರ ಹೆಚ್ಚಾಗಿತ್ತು. ದೇವಾಲಯ ಸಮಿತಿಯಿಂದ ಅನ್ನ ಸಂತರ್ಪಣೆ ನಡೆಯಿತು. ಪೊಲೀಸರು ಭದ್ರತೆ ಒದಗಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.