ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಇಬ್ಬರು ಸಾವು

7

ಬೈಕ್‌ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಇಬ್ಬರು ಸಾವು

Published:
Updated:

ಚನ್ನಗಿರಿ: ತಾಲ್ಲೂಕು ಬಸವಾಪಟ್ಟಣ ಹೋಬಳಿ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ಇರುವ ಕಾಶೀಪುರ ಕ್ರಾಸ್ ಬಳಿ ಕೆಎಸ್ಆರ್‌ಟಿಸಿ ಬಸ್ ಪಲ್ಸರ್ ಬೈಕ್‌ಗೆ ಡಿಕ್ಕಿ ಹೊಡೆದು ಶುಕ್ರವಾರ ಸಂಜೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹಟ್ಟಿ ಗ್ರಾಮದ ವಾಸಿಗಳಾದ ಜಬೀವುಲ್ಲಾ(25) ಹಾಗೂ ಇಸ್ಮಾಯಿಲ್(24) ಮೃತಪಟ್ಟವರು. ಚನ್ನಗಿರಿಯಿಂದ ದಾವಣಗೆರೆಗೆ ಹೋಗುತ್ತಿದ್ದ ಬಸ್ ಬೈಕಿಗೆ ಡಿಕ್ಕಿ ಹೊಡೆಯಿತು.

ಬಸ್ ಕಲ್ಲು ತೂರಾಟ: ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಬಂದ ಕಾಶೀಪುರ ಹಾಗೂ ಇತರೆ ಗ್ರಾಮಗಳ ಗ್ರಾಮಸ್ಥರು ಕೆಎಸ್‍ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ ನಡೆಸಿ ಗಾಜುಗಳನ್ನು ಹೊಡೆದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಸವಾಪಟ್ಟಣ ಪಿಎಸ್ಐ ಕಿಲೋವತಿ ಸ್ಥಳಕ್ಕೆ ಧಾವಿಸಿ ಬಂದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಸವಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಾದ ನಂತರ ಈ ಹೆದ್ದಾರಿಯಲ್ಲಿ ಯಾವುದೇ ಕೆಎಸ್ಆರ್‌ಟಿಸಿ ಬಸ್‌ಗಳು ಸಂಚರಿಸಲಿಲ್ಲ. ಚನ್ನಗಿರಿಯಿಂದ ಸಂತೇಬೆನ್ನೂರು ಮಾರ್ಗದ ಮೂಲಕ ದಾವಣಗೆರೆ ಕಡೆಗೆ ಬಸ್‌ಗಳು ತೆರಳಿದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !