‘ಹನುಮ ಜನಿಸಿದ ನಾಡು’ ಎಂದೇ ಖ್ಯಾತವಾಗಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿಗೆ ಪ್ರತೀ ಭಾನುವಾರ ವಿಶೇಷ ಬಸ್ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಒಂದು ದಿನದ ಪ್ರಯಾಣದಲ್ಲಿ ಅಂಜನಾದ್ರಿ ಬೆಟ್ಟ ಹಂಪಿ ಹಾಗೂ ತುಂಗಭದ್ರಾ ಜಲಾಶಯವನ್ನೂ (ಟಿ.ಬಿ.ಡ್ಯಾಂ) ಪ್ರಯಾಣಿಕರು ಕಣ್ತುಂಬಿಕೊಳ್ಳಲಿದ್ದಾರೆ. ಅಂಜನಾದ್ರಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲು ಅಧಿಕ ಸಂಖ್ಯೆಯ ಪ್ರಯಾಣಿಕರು ಬೇಡಿಕೆ ಇಟ್ಟಿದ್ದಾರೆ ಎನ್ನುತ್ತಾರೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು.