ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮರಸ್ಯದ ರಾಜಕಾರಣಿಯನ್ನು ಆಯ್ಕೆ ಮಾಡಿ’

ಕೂಡಲಸಂಗಮ ಪಂಚಮಸಾಲಿ ಶ್ರೀ ಅಭಿಪ್ರಾಯ
Last Updated 12 ಡಿಸೆಂಬರ್ 2022, 6:16 IST
ಅಕ್ಷರ ಗಾತ್ರ

ಹರಿಹರ: ‘ವಿವಿಧ ಧರ್ಮೀಯರನ್ನು ಒಟ್ಟಿಗೆ ಕರೆದೊಯ್ಯುವ ರಾಜಕಾರಿಣಿಯನ್ನು ಆಯ್ಕೆ ಮಾಡಿದರೆ ಕ್ಷೇತ್ರದ ಜೊತೆಗೆ ಎಲ್ಲ ಸಮುದಾಯಗಳ ಅಭಿವೃದ್ಧಿ ಸಾಧ್ಯ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತಂಜಯ್ಯ ಸ್ವಾಮೀಜಿ ಹೇಳಿದರು.

ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಜನ್ಮದಿನ ನಿಮಿತ್ತ ನಗರದ ಜೆಡಿಎಸ್ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಚ್.ಎಸ್.ಶಿವಶಂಕರ್ ಎಲ್ಲ ಧರ್ಮೀಯರನ್ನು ಸಾಮರಸ್ಯದಿಂದ ಕಾಣುವ ರಾಜಕಾರಣಿ. ಅವರು ಸಂಘಟಿಸುವ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯ, ಧರ್ಮದ ಮಠಾಧೀಶರು, ಪೂಜ್ಯರನ್ನು ಕರೆಸುತ್ತಾರೆ. ಧರ್ಮದ ಹಾದಿಯಲ್ಲಿ ನಡೆಯುವ ರಾಜಕಾರಣಿಗಳು ವಿರಳ’ ಎಂದರು.

‘ನಾನು ಅಧಿಕಾರಕ್ಕಾಗಿ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ. ಅಧಿಕಾರ ಇರಲಿ, ಬಿಡಲಿ ನನ್ನ ಕ್ಷೇತ್ರದ ಜನರ ಹಾಗೂ ನಂಬಿದವರ ಪರವಾಗಿ ದುಡಿಯುತ್ತೇನೆ. ಬುದ್ಧಿ ಮಾತು ಹೇಳಿದಾಗ ಕೆಲವರು ಮುನಿಸಿಕೊಳ್ಳುತ್ತಾರೆ. ಮುಂಬರುವ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಮಾಜಿ ಶಾಸಕ ಎಚ್.ಎಸ್ ಶಿವಶಂಕರ್ ಹೇಳಿದರು.

ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಸ್ವಾಮೀಜಿ, ಕುಂಬಳೂರು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ದಾವಣಗೆರೆ ವಿರಕ್ತ ಮಠದ ಬಸವ ಪ್ರಭು ಶ್ರೀ, ಋಷಭೇಂದ್ರ ಶ್ರೀ ನಂದಿಗುಡಿ ಮಠದ ಶ್ರೀ, ಆವರಗೊಳ್ಳ ಮಠದ ಓಂಕಾರ ಶಿವಾಚಾರ್ಯ ಶ್ರೀ,
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಪಕ್ಷದ ನಗರ ಘಟಕ ಅಧ್ಯಕ್ಷ ಗನ್ನೆವಾಲೆ ಹಬೀಬ್ ಉಲ್ಲಾ, ನಗರಸಭಾ ಸದಸ್ಯರಾದ
ಆರ್.ಸಿ.ಜಾವೀದ್, ಬಿ.ಅಲ್ತಾಫ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT