ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಬ ಜನಾಂಗ ಎಸ್‌ಟಿಗೆ ಸೇರಿಸಲು ಒತ್ತಾಯ

ಜನವರಿ 15ರಿಂದ ಪಾದಯಾತ್ರೆ: ಇಂದು ಪೂರ್ವಭಾವಿ ಸಭೆ
Last Updated 5 ಡಿಸೆಂಬರ್ 2020, 3:34 IST
ಅಕ್ಷರ ಗಾತ್ರ

ದಾವಣಗೆರೆ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಜನವರಿ 15ರಿಂದ ಫೆಬ್ರುವರಿ 7ರ ವರೆಗೆ ಕಾಗಿನೆಲೆಯಿಂದ ಬೆಂಗಳೂರಿಗೆ ಬೃಹತ್‌ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ ವೈ. ಕುಂಬಳೂರು ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾದಯಾತ್ರೆ ಸಂಬಂಧ ಚರ್ಚಿಸಲು ಡಿ. 5ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ದೇವರಾಜ ಅರಸು ಬಡಾವಣೆಯ ಬೀರೇಶ್ವರ ಭವನದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ರಂಜನಾನಂದಪುರಿ ಸ್ವಾಮೀಜಿ ಹಾಗೂ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಮಾಜದವರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವ ಸಂಬಂಧ ಈಗಾಗಲೇ ಹಲವೆಡೆ ಸಭೆ, ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹೋರಾಟವನ್ನು ಜನಾಂದೋಲನವಾಗಿ ರೂಪಿಸಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಘದ ಬಿ.ಎಂ. ಸತೀಶ್‌, ‘ಮೀಸಲಾತಿ ಹೋರಾಟ ಸಂಬಂಧ ದಾವಣಗೆರೆಯಲ್ಲೂ ಶೀಘ್ರ ಸಮಾವೇಶ ನಡೆಸಲಾಗುವುದು. ಮೀಸಲಾತಿ ಬೇಡಿಕೆ ಇಂದು ನಿನ್ನೆಯದಲ್ಲ, ಈಗ ಮುನ್ನೆಲೆಗೆ ಬಂದಿದೆ ಅಷ್ಟೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸಮಾಜದ ನಾಯಕ ಎಂದು ಪರಿಗಣಿಸಿದೆ. ಆದರೆ ಕರೆದರೂ ಅವರೇ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ.ಇದು ಸಮಾಜದ ಹೋರಾಟವೇ ಹೊರತು ಯಾರೋ ಒಬ್ಬರ ಹೋರಾಟ ಅಲ್ಲ. ಹೋರಾಟದ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಆರೋಪದಲ್ಲಿ ಹುರುಳಿಲ್ಲ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಧೂಡಾ ಅಧ‌್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಮುಖಂಡರಾದ ಹದಡಿ ಲಿಂಗಪ್ಪ, ಸುನಂದಮ್ಮ ಪರಶುರಾಮಪ್ಪ, ಸಿದ್ದಪ್ಪ, ಎಚ್‌.ಜಿ. ಸಂಗಪ್ಪ, ಎಸ್‌.ಎಸ್‌. ಗಿರೀಶ್‌, ಎಸ್‌. ಎಸ್‌. ಪ್ರಕಾಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT