ದಾವಣಗೆರೆ: ‘ಕೇಂದ್ರ ಸರ್ಕಾರವು ಮಾಲೀಕರ ಪರವಾದ ಕಾರ್ಮಿಕ ನೀತಿಗಳನ್ನು ಜಾರಿಗೊಳಿಸಿದೆ. ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ರಾಜ್ಯ ಘಟಕದ ಉಪಾಧ್ಯಕ್ಷ ಆರ್.ಎಸ್. ಬಸವರಾಜ್ ದೂರಿದರು.

ಇಲ್ಲಿನ ರೋಟರಿ ಬಾಲಭವನಲ್ಲಿ ಸಿಐಟಿಯು ಜಿಲ್ಲಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂಘಟನೆಯ 7ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

‘ಜಾತಿ, ಧರ್ಮದ ಹೆಸರಲ್ಲಿ ಕಾರ್ಮಿಕರ ಐಕ್ಯತೆಯನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿವೆ. ಕಾರ್ಮಿಕರಿಗೆ ಕನಿಷ್ಠ ವೇತನ ₹36,000 ನೀಡಬೇಕು’ ಎಂದು ಒತ್ತಾಯಿಸಿದರು.

‘ಅಸಂಘಟಿತ ವಲಯದ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರಿಗೆ ಸಮಗ್ರವಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ನೀಡಬೇಕು. ರಾಜ್ಯ ಸರ್ಕಾರದ ಬಜೆಟ್ನಲ್ಲಿ ₹1000 ಕೋಟಿ ಅನುದಾನ ಒದಗಿಸಬೇಕು’ ಎಂದು ಸಿಐಟಿಯು ರಾಜ್ಯ ಘಟಕದ ಕಾರ್ಯದರ್ಶಿ ಮಹೇಶ್ ಪತ್ತಾರ್ ಆಗ್ರಹಿಸಿದರು.

ಸಿಐಟಿಯು ಚಿತ್ರದುರ್ಗ ಜಿಲ್ಲಾ ಘಟಕದ ಸಂಚಾಲಕ ಡಿ.ಎಂ. ಮಲ್ಲಪ್ಪ, ದಾವಣಗೆರೆ ಜಿಲ್ಲಾ ಘಟಕದ ಸಂಚಾಲಕ ಆನಂದರಾಜು, ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬೇತೂರು ಬಸವರಾಜು, ಕಟ್ಟಡ ಕಾರ್ಮಿಕ ಸಂಘಟನೆಯ ನೇತ್ರಾವತಿ, ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಶಿವಮೂರ್ತಿ, ಮುದಿಮಲ್ಲನಗೌಡ, ಮಂಜುನಾಥ್, ಕರಿಯಮ್ಮ, ಆಟೊ ಚಾಲಕರ ಸಂಘದ ಶ್ರೀನಿವಾಸ ಮೂರ್ತಿ ಮತ್ತಿತರರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಮೆರವಣಿಗೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.