ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಮತಿ: ಉದ್ಘಾಟನೆಗೆ ಮುನ್ನ ಶಿಥಿಲಾವಸ್ಥೆಗೆ ತಲುಪಿದದ ಮಹಿಳಾ ವಿಶ್ರಾಂತಿ ಕೊಠಡಿ

Published 27 ನವೆಂಬರ್ 2023, 6:41 IST
Last Updated 27 ನವೆಂಬರ್ 2023, 6:41 IST
ಅಕ್ಷರ ಗಾತ್ರ

ನ್ಯಾಮತಿ: ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮೂಲಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಲಾ, ವಾಣಿಜ್ಯ, ಬಿಸಿಎ, ವಿಜ್ಞಾನ ವಿಭಾಗಗಳಲ್ಲಿ 400 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಇದ್ದು, ಗ್ರಾಮೀಣ ಪ್ರದೇಶಗಳಿಂದ ಬರುತ್ತಾರೆ.

2014-15ನೇ ಸಾಲಿನ ಕಾಲೇಜು ಶಿಕ್ಷಣ ಇಲಾಖೆಯ ಯೋಜನೆ ಅಡಿಯಲ್ಲಿ ಹೊನ್ನಾಳಿ ಕೆ.ಆರ್.ಐ.ಡಿ.ಎಲ್ ಉಪವಿಭಾಗದ ನಿಗಾದಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸಿದ್ದು, ಕಾಮಗಾರಿ ಅಪೂರ್ಣವಾಗಿದೆ. ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಕಲ್ಪಿಸಿಲ್ಲ. ಕಿಟಕಿಯ ಗಾಜುಗಳು ಒಡೆದಿವೆ. ಕೊಠಡಿಯ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಶಿಥಿಲಾವಸ್ಥೆ ತಲುಪಿದೆ. ಲಕ್ಷಾಂತರ ಅನುದಾನದಲ್ಲಿ ನಿರ್ಮಾಣವಾಗಿರುವ ಕೊಠಡಿ ಹಾಳಾಗುತ್ತಿದ್ದರೂ, ಕಾಲೇಜಿನ ಆಡಳಿತ ಮಂಡಳಿ, ಕಾಲೇಜು ಅಭಿವೃದ್ಧಿ ಮಂಡಳಿಯವರು ಗಮನಹರಿಸದೇ ಇರುವುದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಕೊಠಡಿ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ಈ ಕೊಠಡಿಯಲ್ಲಿ ಸಿಮೆಂಟ್ ಇತರೆ ಸಾಮಗ್ರಿಗಳನ್ನು ತುಂಬಿ ಹಾಳು ಮಾಡಿರುವ ಬಗ್ಗೆ ಹಾಗೂ ವಿಶ್ರಾಂತಿ ಕೊಠಡಿಯನ್ನು ಉಪಯೋಗಿಸಲು ಅನುವು ಮಾಡಿಕೊಡುವಂತೆ ಅಂದಿನ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿ (ಸಿ.ಡಿ.ಸಿ.) ಹಾಗೂ ಪ್ರಾಂಶುಪಾಲರಿಗೆ ಮನವಿ ಮಾಡಿದರೂ ಉಪಯೋಗವಾಗಿಲ್ಲ ಎಂದು ಅಂತಿಮ ವರ್ಷದ ವಿದ್ಯಾರ್ಥಿನಿಯರು ದೂರುತ್ತಾರೆ.

ಕಾಲೇಜಿಗೆ ಸುತ್ತಮುತ್ತಲ ಗ್ರಾಮಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಬಿಡುವಿನ ವೇಳೆಯಲ್ಲಿ ವಿಶ್ರಾಂತಿ ಕೊಠಡಿಯ ಅವಶ್ಯಕತೆ ಇದೆ.
ವಿಶ್ರಾಂತಿ ಕೊಠಡಿಯ ಒಳಗಡೆ ಶೌಚಾಲಯ, ಕುರ್ಚಿ, ಟೇಬಲ್‌, ಫ್ಯಾನ್ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಬೇಕಾಗುತ್ತದೆ. ಆದರೆ, ಇಲ್ಲಿರುವ ಕೊಠಡಿಯಲ್ಲಿ ಇಂತಹ ಯಾವ ಸೌಲಭ್ಯಗಳನ್ನೂ ಕಲ್ಪಿಸಿಲ್ಲ. ಶೌಚಾಲಯವಿದ್ದರೂ, ನೀರಿನ ವ್ಯವಸ್ಥೆ ಇಲ್ಲ. ಗಾಜುಗಳು ಒಡೆದಿವೆ.

ಕಾಲೇಜಿನ ಪ್ರಾಂಶುಪಾಲೆಯಾಗಿ ಅಧಿಕಾರ ವಹಿಸಿಕೊಂಡು 1 ತಿಂಗಳಾಗಿದೆ. ಪೂರ್ಣ ಮಾಹಿತಿ ಇಲ್ಲ. ಆದಷ್ಟು ಬೇಗ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು

-ಟಿ.ಸಿ.ಭಾರತಿ, ಪ್ರಾಂಶುಪಾಲೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT