ಮಂಗಳವಾರ, ಜನವರಿ 19, 2021
24 °C
ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್‌ ಮುಖಂಡ ಅನೀಸ್‌ ‍ಪಾಷ

ಜೆಡಿಎಸ್‌ಗೆ ಕಾಡುತ್ತಿದೆ ಸಂಘಟನೆಯ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆದರೆ ಪಕ್ಷದ ಸಂಘಟನೆಯ ಕೊರತೆಯಿಂದಾಗಿ ನಿಷ್ಕ್ರಿಯರಾಗಿದ್ದಾರೆ ಎಂದು ಜೆಡಿಎಸ್‌ ಮುಖಂಡ ಅನೀಸ್‌ ‍ಪಾಷ ಹೇಳಿದರು.

ಜೆಡಿಎಸ್‌ ಜಿಲ್ಲಾ ಕಾರ್ಮಿಕರ ವಿಭಾಗದ ಕಾರ್ಯದರ್ಶಿ ಅಕ್ಬರ್ ಅಧ್ಯಕ್ಷತೆಯಲ್ಲಿ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನುಮುಂದೆ ಜಿಲ್ಲೆಯಲ್ಲಿ ನಿರಂತರವಾಗಿ ಪಕ್ಷದ ಕಾರ್ಯಕ್ರಮಗಳನ್ನು ಮೂಲ ಕಾರ್ಯಕರ್ತರನ್ನು ಸೇರಿಸಿಕೊಂಡು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಹಾ ಕಾರ್ಯದರ್ಶಿ ಎಚ್.ಸಿ. ಗುಡ್ಡಪ್ಪ, ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ಅತ್ಯುತ್ತಮ ಆಡಳಿತ ನೀಡಿದ್ದರು. ಬೇರೆ ಪಕ್ಷಗಳು ಅಂಥ ಆಡಳಿತ ನೀಡಿಲ್ಲ’ ಎಂದು ಹೇಳಿದರು.

ಜೆಡಿಎಸ್ ನಾಯಕರಾದ ಜಸ್ಟಿನ್ ಜಯಕುಮಾರ್, ಸಂಗನಗೌಡ್ರು, ಪಾಪಣ್ಣ, ಶ್ರೀಧರ್ ಪಾಟೀಲ್ ಮಾತನಾಡಿದರು. ದಾದಾಪೀರ್ ಸ್ವಾಗತಿಸಿದರು. ಪ್ಯಾರು ವಂದಿಸಿದರು. ರಾಜಸಾಬ್, ಗೋಣಿವಾಡ ಮಂಜುನಾಥ್ ಅವರೂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು