ದಾವಣಗೆರೆ: ತಾಲ್ಲೂಕಿನ ಹೊನ್ನೂರು ಗ್ರಾಮದ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಶನಿವಾರ ಆರಂಭವಾಗಿದೆ. ರೈತರ ವಿರೋಧದ ನಡುವೆಯೂ ಕೆರೆಯ ಗಡಿ ಗುರುತು ಮಾಡಿದ ಅಧಿಕಾರಿಗಳ ತಂಡ, ಅಂಗಳದಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದೆ.

ಜಿಲ್ಲಾಡಳಿತದ ಈ ಕ್ರಮಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳದ ಫಸಲು ಕೈಸೇರುವವರೆಗೂ ಕಾಲಾವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸದ ಅಧಿಕಾರಿಗಳು, ಒತ್ತುವರಿಯ ಅರ್ಧ ಭಾಗದಷ್ಟು ಪ್ರದೇಶವನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊನ್ನೂರು ಗ್ರಾಮದಲ್ಲಿ 392 ಎಕರೆ ವಿಸ್ತೀರ್ಣದ ಕೆರೆ ಇದೆ. ಈ ಕೆರೆಯ ಒಂದಷ್ಟು ಭಾಗವನ್ನು ಒತ್ತುವರಿ ಮಾಡಿಕೊಂಡಿದ್ದ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದರು. ಕೆರೆಗೆ ಹರಿದು ಬರುತ್ತಿದ್ದ ನೀರಿನ ಮಾರ್ಗಗಳು ಮುಚ್ಚಿಹೋಗಿದ್ದವು. ಈ ಕುರಿತು ಇದೇ ಗ್ರಾಮದ ಕೆಲ ರೈತರು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ದೂರು ನೀಡಿದ್ದರು. ಈಚೆಗೆ ನಡೆದ ಸಭೆಯಲ್ಲಿ ಕೂಡ ಗಮನ ಸೆಳೆದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಒತ್ತುವರಿ ತೆರವಿಗೆ ಸೂಚನೆ ನೀಡಿತ್ತು. ಕಂದಾಯ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸರ ತಂಡ ಗ್ರಾಮಕ್ಕೆ ಭೇಟಿ ನೀಡಿ ಕೆರೆಯ ಗಡಿ ಗುರುತಿಸಿತ್ತು. ಕೆರೆಯ ಸುತ್ತ ಕಂದಕ ತೆಗೆದು ರೈತರಿಗೆ ಎಚ್ಚರಿಕೆ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.